ಮಾರ್ಚ್ ವೇಳೆಗೆ ಕರ್ನಾಟಕವನ್ನು ಸಂಪೂರ್ಣ “ಬಯಲು ಬಹಿರ್ದೆಸೆಮುಕ್ತ’ ಮಾಡಲಾಗುವುದು’ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
Advertisement
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಮ್ಮಿಕೊಂಡಿದ್ದ ಗ್ರಾಮೀಣ ಕರ್ನಾಟಕದ 1,937 ಗ್ರಾಮ ಪಂಚಾಯತ್‌ಗಳನ್ನು ಬಯಲು ಬಹಿರ್ದೆಸೆಮುಕ್ತ ಘೋಷಣೆ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನೈರ್ಮಲ್ಯ ಮತ್ತು ಶುಚಿತ್ವದ ಗಾಂಧೀಜಿ ಕನಸು ಸಾಕಾರಗೊಳಿಸುವುದು ನಮ್ಮ ಗುರಿ. ಇಡೀ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವ ಸಂಕಲ್ಪ ನಮ್ಮದಾಗಿದೆ’ ಎಂದು ಹೇಳಿದರು.
Related Articles
“ಶೌಚಾಲಯಕ್ಕಾಗಿ ಸಮರ’ ಎಂಬ ಸಂಕಲ್ಪದಲ್ಲಿ ಸಾಕಷ್ಟು ಸಾಧನೆ ಆಗಿದೆ. ಅನೇಕ ಜಿಲ್ಲೆಗಳು ಉತ್ತಮ ಪ್ರಗತಿ ಸಾಧಿಸಿವೆ. ಆದರೆ ಇನ್ನೂ ಕೆಲವು ಜಿಲ್ಲೆಗಳು ಹಿಂದೆ ಬಿದ್ದಿವೆ. ಈ ಬಗ್ಗೆ ಪಂಚಾಯತ್‌ಗಳ ಅಧ್ಯಕ್ಷರು ಹಾಗೂ ಅಧಿಕಾರಿಗಳು ಆಸಕ್ತಿ ವಹಿಸದೇ ಹೋದರೆ ಗುರಿ ಸಾಧನೆಗೆ ತೊಂದರೆ ಆಗುತ್ತದೆ.
Advertisement
ಹೀಗಾಗಿ 2018ರ ಗುರಿ ಇಟ್ಟುಕೊಂಡು ದೃಢ ನಿರ್ಧಾರದೊಂದಿಗೆ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಿಮ್ಮ ಜಿಲ್ಲೆ, ತಾಲೂಕು, ಗ್ರಾಮಗಳು ಬಯಲು ಶೌಚ ಮುಕ್ತ ಆದರೆ, ನಿಮಗೇ ಕಿರೀಟ. ಅದರಿಂದ ನಿಮಗೂ ಒಳ್ಳೆಯ ಹೆಸರು ಬರುತ್ತದೆ, ಸರಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ. ಮುಖ್ಯವಾಗಿ ಗಾಂಧೀಜಿಯವರ ಸ್ವತ್ಛತೆಯ ಕನಸು ಸಾಕಾರಗೊಳ್ಳುತ್ತದೆ ಎಂದು ಹೇಳಿದರು.
ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ್, ಸುಲಭ್ ಇಂಟರ್‌ನ್ಯಾಷನಲ್ ಸಂಸ್ಥಾಪಕ ಡಾ| ಬಿಂದೇಶ್ವರ್ ಪಾಠಕ್, ನಗರಾಭಿವೃದ್ಧಿ ಸಚಿವ ಆರ್. ರೋಷನ್ ಬೇಗ್, ಮಾಜಿ ಸಂಸದ ಸಿ. ನಾರಾಯಣಸ್ವಾಮಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಎನ್. ನಾಗಾಂಬಿಕಾದೇವಿ ಮತ್ತಿತರರು ಉಪಸ್ಥಿತರಿದ್ದರು.
ಆರು ಜಿಲ್ಲೆಗಳು ಬಯಲುಶೌಚ ಮುಕ್ತಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಕೋಲಾರ
ತಾಲೂಕುಗಳು: 51
ಗ್ರಾ.ಪಂ.ಗಳು: 1,937
ಗ್ರಾಮಗಳು: 10,340
ಬಯಲು ಶೌಚದಿಂದ ಮುಕ್ತಿ ಪಡೆದ ಜನ: 1.57 ಕೋಟಿ ಜನಸಂಖ್ಯೆ. ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ
ಯೋಜನೆಗಳ ಅನುಷ್ಠಾನ ಮತ್ತು ಪರಿಣಾಮಕಾರಿ ಆಡಳಿತ ನಿರ್ವಹಣೆಯಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯದ 176 ಗ್ರಾ. ಪಂ.ಗಳಿಗೆ “ಗಾಂಧಿ ಗ್ರಾಮ ಪುರಸ್ಕಾರ’ ಪ್ರದಾನ ಮಾಡಲಾಯಿತು. ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾ.ಪಂ.ಗಳ ಪಿಡಿಓ ಹಾಗೂ ಅಧ್ಯಕ್ಷರಿಗೆ ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್, ಸುಲಭ್ ಇಂಟರ್‌ನ್ಯಾಷನಲ್ ಸಂಸ್ಥಾಪಕ ಡಾ| ಬಿಂದೇಶ್ವರ್ ಪಾಠಕ್, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಪ್ರಶಸ್ತಿ ನೀಡಿ ಗೌರವಿಸಿದರು. ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಪಂಚಾಯತ್‌ಗಳಿಗೆ ಅಭಿನಂದನೆ ಸಲ್ಲಿಸಿದರು.