ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಮಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆದುಕೊಂಡಿದ್ದಾರೆ. ಶನಿವಾರವಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು ಭಾನುವಾರ ಹೊಸ ನಿರ್ಧಾರವನ್ನು ಕೈಗೆತ್ತಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: IPL ಟಾಸ್ ಗೆದ್ದು ಆರ್ ಸಿಬಿ ಯನ್ನು ಬ್ಯಾಟಿಂಗ್ ಗೆ ಇಳಿಸಿದ ಗುಜರಾತ್
Related Articles