Advertisement

Mysore: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಗುರುಪಾದಸ್ವಾಮಿ ಬಿಜೆಪಿ ಸೇರ್ಪಡೆ

10:26 PM Apr 11, 2024 | Team Udayavani |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಆಪರೇಷನ್‌ ಕಮಲದ ಮೂಲಕ ಕಾಂಗ್ರೆಸ್‌ಗೆ ಶಾಕ್‌ ನೀಡಿದೆ.

Advertisement

ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ತಮ್ಮ ಬೆಂಬಲಿಗರೊಂದಿಗೆ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.

ವಿಜಯೇಂದ್ರ ಅವರು ಪಕ್ಷದ ಬಾವುಟ ನೀಡಿ ಎಲ್ಲರನ್ನೂ ಬರಮಾಡಿಕೊಂಡರು. ಈ ಸಂದರ್ಭ ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌. ಬಾಲರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಶಾಸಕ ಟಿ.ಎಸ್‌. ಶ್ರೀವತ್ಸ, ನಗರಾಧ್ಯಕ್ಷ ಎಲ್‌. ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಎಲ್‌.ಆರ್‌. ಮಹದೇವಸ್ವಾಮಿ, ಮಾಜಿ ಶಾಸಕ ನಿರಂಜನ್‌ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next