Advertisement

ಕಾಂಗ್ರೆಸ್ ಸಿದ್ದಾಂತ ಒಪ್ಪಿ ಬಂದರೆ ಸೋಮಶೇಖರ್, ಶಿವರಾಮ ಹೆಬ್ಬಾರ್ ಗೆ ಸ್ವಾಗತ: ಸಿಎಂ

07:47 PM Mar 05, 2024 | Team Udayavani |

ಕಾರವಾರ ( ಬನವಾಸಿ): ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಸೋಮಶೇಖರ್ ,ಶಿವರಾಮ ಹೆಬ್ಬಾರರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ಅವರು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಅವರು ಇಂದು ಬನವಾಸಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ಎಸ್ .ಟಿ. ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದರು.

ಬಾಂಬ್ ಸ್ಪೋಟ ಪ್ರಕರಣ ತನಿಖೆ ನಡೆಯುತ್ತಿದೆ:

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ದವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.

ದೇಶದ್ರೋಹಿಗಳು ಯಾರು ?

Advertisement

ಪಾಕ್ ಪರ ಘೋಷಣೆ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸುತ್ತಾ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂದು ತಿಳಿಯುತ್ತದೆ ಎಂದರು.

ಅನಂತಕುಮಾರ್ ಹೆಗಡೆಗೆ ಸಂಸ್ಕೃತಿ ಇಲ್ಲ :

ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ, ಮುಖ್ಯಮಂತ್ರಿಗಳಿಗೆ ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ. ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕಾರ್ಯಕ್ರಮ ರದ್ದಾಗಿದೆ ಎಂದು ಹೇಳಿ ಆರ್ಕೆಸ್ಟ್ರಾ ಕಲಾವಿದೆ ಮೇಲೆ ಸಾಮೂಹಿಕ ಅತ್ಯಾಚಾರ…

Advertisement

Udayavani is now on Telegram. Click here to join our channel and stay updated with the latest news.

Next