Advertisement

ಸಿಎಸ್‌ ಆಯ್ಕೆ ಅಧಿಕಾರ ಸಿಎಂಗೆ

06:00 AM Jun 29, 2018 | Team Udayavani |

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಮತ್ತೆ ಮೂರು ತಿಂಗಳು ಅಧಿಕಾರದಲ್ಲಿ ಮುಂದುವರಿಸಲು ಕೇಂದ್ರಕ್ಕೆ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಹೊಸ ಮುಖ್ಯ ಕಾರ್ಯದರ್ಶಿ ಆಯ್ಕೆ ಅಧಿಕಾರವನ್ನು ಸಚಿವ ಸಂಪುಟ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೀಡಿದೆ.

Advertisement

ಸಿಎಸ್‌ ರತ್ನಪ್ರಭಾ ಅಧಿಕಾರಾವಧಿ ಮಾರ್ಚ್‌ ಅಂತ್ಯಕ್ಕೆ ಕೊನೆಗೊಂಡಿದ್ದು, ಚುನಾವಣೆ ಕಾರಣದಿಂದಾಗಿ ಅವರನ್ನೇ ಮೂರು ತಿಂಗಳ ಕಾಲ ಮುಂದುವರಿಸಲು ನಿರ್ಧರಿಸಿದ್ದ ಹಿಂದಿನ ಕಾಂಗ್ರೆಸ್‌ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದ್ದಾಗ ಸ್ಪಂದನೆ ಸಿಕ್ಕಿತ್ತು. ಇದೀಗ ಸಮ್ಮಿಶ್ರ ಸರ್ಕಾರ ಮತ್ತೆ ಅವರನ್ನು ಮೂರು ತಿಂಗಳು ಮುಂದುವರಿಸಲು ಅವಕಾಶ ಕೋರಿ ರಾಜ್ಯ ಸರ್ಕಾರ 10 ದಿನಗಳ ಹಿಂದೆಯೇ ಕೇಂದ್ರಕ್ಕೆ ಪತ್ರ ಬರೆದಿದೆ. 

ಆದರೆ, ಇದುವರೆಗೂ ಉತ್ತರ ಸಿಕಿಲ್ಲ. ಈ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ನೇತೃತ್ವದ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು, ಜೂ. 30ರೊಳಗೆ ಕೇಂದ್ರದಿಂದ ಉತ್ತರ ಬರದಿದ್ದಲ್ಲಿ ಹೊಸ ಮುಖ್ಯ ಕಾರ್ಯದರ್ಶಿಯನ್ನು ನೇಮಿಸುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ವಹಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next