ಚಿಕ್ಕಬಳ್ಳಾಪುರ: ಮಹಾತ್ಮ ಜ್ಯೋತಿ ಬಾ ಫುಲೆ ಜಯಂತಿ ಪ್ರಯುಕ್ತ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಮಹಿಳೆಯರಿಗಾಗಿಯೇ ವಿಶೇಷವಾಗಿ ತೆರೆದಿರುವ ಕೋವಿಡ್ ಲಸಿಕಾ ಪಿಂಕ್ ಬೂತ್‌ಗಳನ್ನು ಜಿಲ್ಲಾಧಿಕಾರಿ ಆರ್.ಲತಾ ಉದ್ಘಾಟಿಸಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿನೂತನವಾಗಿ ತೆರೆದಿರುವ ಕೋವಿಡ್ ಪಿಂಕ್ ಬೂತ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ವಿಶೇಷವಾಗಿಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಹಾಕಿಸಿಕೊಳ್ಳುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಪಿಂಕ್ ಬೂತ್‌ಗಳನ್ನು ತೆರೆಯಲಾ ಗಿದೆ. ಈ ಮೂಲಕ ಮಹಾತ್ಮರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.
1.2 ಲಕ್ಷ ಜನರಿಗೆ ಲಸಿಕೆ: ಜಿಲ್ಲೆಯಲ್ಲಿ ಪ್ರತಿ ದಿನ 7ರಿಂದ 8 ಸಾವಿರ 45 ವರ್ಷ ಮೇಲ್ಪಟ್ಟ ಜನರಿಗೆಲಸಿಕೆ ಹಾಕಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 1.2ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದ 1.80ಲಕ್ಷ 45 ವರ್ಷ ಮೇಲ್ಪಟ್ಟವರಿಗೆ ಏ.14ರವರೆಗೆನಡೆಯುವ ಕೋವಿಡ್ ಲಸಿಕಾ ಉತ್ಸವದಲ್ಲಿ ಒಟ್ಟು 91 ಲಸಿಕಾ ಕೇಂದ್ರಗಳ ಮೂಲಕ ಲಸಿಕಾ ಹಾಕಲು ಉದ್ದೇಶಿಸಲಾಗಿದೆ ಎಂದರು.
ಸರ್ಕಾರಿ ಕಚೇರಿಯಲ್ಲಿ ಲಸಿಕೆ ವ್ಯವಸ್ಥೆ: ಏ.12ರಿಂದ ಹೆಚ್ಚು ಜನ ಸೇರಿ ಒಂದೆಡೆ ಕೆಲಸ ಮಾಡುವ ಸರ್ಕಾರಿ ಕಚೇರಿಗಳಲ್ಲಿಯೇ ಲಸಿಕೆ ಹಾಕುವ ವ್ಯವಸ್ಥೆಮಾಡಲಾಗುತ್ತಿದೆ. ಈ ಮೂಲಕ ಆ ಕಚೇರಿಯಲ್ಲಿನ ಅಧಿಕಾರಿ, ಸಿಬ್ಬಂದಿ ಹಾಗೂ ಸದರಿ ಕಚೇರಿಗೆ ಭೇಟಿನೀಡುವ ಸಾರ್ವಜನಿಕರಿಗೆ ಲಸಿಕೆ ಹಾಕಲಾಗುವುದು. ಇದರ ಪ್ರಯುಕ್ತ ಸೋಮವಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳ ನ್ಯಾಯಾಲಯದ ಅಧಿಕಾರಿ, ಸಿಬ್ಬಂದಿ, ವಕೀಲರಿಗೆ, ನ್ಯಾಯಾಲಯದಕೆಲಸಕ್ಕೆ ಬರುವ ಸಾರ್ವಜನಿಕರಿಗೆ ಲಸಿಕೆ ಹಾಕ ಲಾಗುವುದು. ಆದ್ದರಿಂದ ನ್ಯಾಯಾಲಯದಲ್ಲಿಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿ, ವಕೀಲರು ತಮ್ಮ ಕುಟುಂಬ ಸಮೇತ 45 ವರ್ಷಮೇಲ್ಪಟ್ಟವರು ಆಗಮಿಸಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಏ.14ರಂದು ಡಾ. ಬಿ. ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಚಿಕ್ಕಬಳ್ಳಾಪುರ ನಗರದ 31ನೇ ವಾರ್ಡ್‌ನಅಂಬೇಡ್ಕರ್ ನಗರದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷ ಡಿ.ಎಸ್ ಆನಂದರೆಡ್ಡಿ(ಬಾಬು),ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ.ಚನ್ನಕೇಶವರೆಡ್ಡಿ (ಪ್ರಭಾರ), ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ರಮೇಶ್, ಜಿಲ್ಲಾ ಸರ್ಕಾರಿನೌಕರರ ಸಂಘದ ಅಧ್ಯಕ್ಷ ಡಾ.ಹರೀಶ್, ತಾಲೂಕುವೈದ್ಯಾಧಿಕಾರಿ ಡಾ.ಮಂಜುಳಾ, ನಗರಸಭೆ ಪೌರಾಯುಕ್ತ ಡಿ.ಲೋಹಿತ್ ಉಪಸ್ಥಿತರಿದ್ದರು.