Advertisement
ಚಿಕ್ಕಬಳ್ಳಾಪುರಜಿಲ್ಲೆಯ ಉಸ್ತುವಾರಿ ಸಚಿವಡಾ.ಕೆ. ಸುಧಾಕರ್ ಅವರು 5 ಶಾಲೆ ಹಾಗೂ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಶಾಸಕರು ತಲಾ 03ಶಾಲೆ ದತ್ತು ತೆಗೆದುಕೊಂಡಿದ್ದು ಅದನ್ನು ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಅಭಿವೃದ್ಧಿಗೊಳಿಸಲು ಅಂದಾಜು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಇದರಿಂದ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ ಒದಗಿ ಬಂದಂತಾಗಿದೆ.
Related Articles
Advertisement
ಶಾಸಕರು ದತ್ತು ತೆಗೆದುಕೊಂಡ ಜಿಲ್ಲೆ ಶಾಲೆಗಳ ವಿವರ : ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ಪೆರೇಸಂದ್ರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಗೌರಿಬಿದನೂರು ತಾಲೂಕು ಮಂಚೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದಿಬ್ಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗಂಗರೆಕಾಲುವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಂಡಿಕಲ್ ಕರ್ನಾಟಕ ಪಬ್ಲಿಕ್ ಶಾಲೆಯನ್ನು ದತ್ತು ಪಡೆದಿದ್ದಾರೆ. ಈ ಶಾಲೆಗಳಲ್ಲಿ ಹೊಸ ಕೊಠಡಿಗಳ ನಿರ್ಮಾಣಶಾಲೆಗಳಕೊಠಡಿಗಳ ದುರಸ್ತಿ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇ-ತಿಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಶೆಟ್ಟಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆ, ಶಿಡ್ಲಘಟ್ಟದ ಕೋಟೆ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದು ಕೊಳ್ಳಲಾಗಿದೆ. ಅದೇ ರೀತಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಕುರುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೇಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗೌರಿಬಿದನೂರು ಕೋಟೆ ಕರ್ನಾಟಕ ಪಬ್ಲಿಕ್ ಶಾಲೆಯನ್ನು ದತ್ತು ತೆಗೆದುಕೊಳ್ಳಲಾಗಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಗೂಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಡಿಬಂಡೆಯ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಬಾಗೇಪಲ್ಲಿಯ ಸರ್ಕಾರಿ ಕನ್ನಡ ಮಾದರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಬಟ್ಲಹಳ್ಳಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಆನೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕೈವಾರದ ಕರ್ನಾಟಕ ಪಬ್ಲಿಕ್ ಶಾಲೆ ದತ್ತು ತೆಗೆದುಕೊಳ್ಳಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ತಮ್ಮಕ್ಷೇತ್ರಾಭಿವೃದ್ಧಿ ನಿಧಿಯಿಂದ ಸರ್ಕಾರಿಶಾಲೆ ದತ್ತು ಪಡೆದು ಅಭಿವೃದ್ಧಿ ಗೊಳಿಸಲು ಮುಂದಾಗಿದ್ದಾರೆ. ಇದರಿಂದ ಮಕ್ಕಳಕಲಿಕೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡಿದಂತಾಗುತ್ತದೆ. – ನಾಗೇಶ್, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ
ಶಿಡ್ಲಘಟ್ಟದ ಸರ್ಕಾರಿ ಬಾಲಕಿಯರ ಶಾಲೆಯನ್ನು ಶಾಸಕರು ದತ್ತು ಪಡೆದಿರುವುದು ಸ್ವಾಗತಾರ್ಹ. ಶಿಥಿಲ ವ್ಯವಸ್ಥೆಯಲ್ಲಿರುವ ಕೊಠಡಿ ಅಭಿವೃದ್ಧಿಗೊಳಿಸಿ ಶಾಲೆ ಒಳಗೆ ಅಕ್ರಮ ಪ್ರವೇಶವನ್ನು ತಡೆಗಟ್ಟಲುಕಾಂಪೌಂಡ್ ಗೋಡೆ ಹೆಚ್ಚಿಸಲುಕ್ರಮ ಕೈಗೊಳ್ಳಬೇಕಾಗಿದೆ. – ವೆಂಕಟೇಶ್, ಅಧ್ಯಕ್ಷರು, ಶಾಲಾ ಅಭಿವೃದ್ಧಿ ಸಮಿತಿ ಶಿಡ್ಲಘಟ್ಟ
ಎಂ.ಎ.ತಮೀಮ್ ಪಾಷ