ಚಿಕ್ಕಮಗಳೂರು: ಆಟ ಆಡುವಾಗ ಇಂಗು ಗುಂಡಿಗೆ ಬಿದ್ದು ಬಾಲಕ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ.
ಅಶರ್ ಡಿ ಗುನ್ನಾ (8) ಮೃತ ಬಾಲಕ.
ಹೊಸದಾಗಿ ನಿರ್ಮಾಣವಾಗುತ್ತಿದ್ದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆ ನಿರ್ಮಾಣಕ್ಕೆ ನೀರಿಗಾಗಿ ಇಂಗು ಗುಂಡಿ ನಿರ್ಮಾಣ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ.
ಶಾಲೆ ಕಟ್ಟಲು ಟ್ಯಾಂಕ್ ಅಥವ ಅಂಡರ್ ಗ್ರೌಂಡ್ ಟ್ಯಾಂಕ್ ನಿರ್ಮಾಣ ಮಾಡಬೇಕಾಗಿದ್ದು, ಫೀಲ್ಡ್ ಪಕ್ಕದಲ್ಲೇ ಇಂಗು ಗುಂಡಿ ನಿರ್ಮಾಣ ಮಾಡಿದ್ದರಿಂದ ಈ ಘಟನೆ ನಡೆದಿದೆ.
ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕೆಂದು ಸ್ಥಳಿಯರ ಆಗ್ರಹಿಸಿದ್ದಾರೆ.