ಚಿಕ್ಕಮಗಳೂರು: ಕರ್ತವ್ಯ ಲೋಪ ಎಸಗಿದ ಆರೋಪದಡಿ ಪ್ರತ್ಯೇಕ ಪ್ರಕರಣದಲ್ಲಿ ಪಿಎಸ್‍ಐ ಸೇರಿದಂತೆ 11ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತ್ತು ಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಲ್ಲೇನಹಳ್ಳಿ ಮೂಲದ ವ್ಯಕ್ತಿಯೊಬ್ಬರನ್ನು ಬಂಧಿಸಿದ ಆತನ ಎಟಿಎಂ ಮತ್ತು ಪೆಟಿಯಂ ಬಂದಿತ ವ್ಯಕ್ತಿಯ ಸಂಬಧಿಕರಿಂದ 3 ಲಕ್ಷ 40 ಸಾವಿರ ರೂ. ಹಣ ಪಡೆದುಕೊಂಡಿದ್ದು, ಮೇಲ್ನೋಟಕ್ಕೆ ಹಣ ಪಡೆದಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಅಮಾನತ್ತಿನಲ್ಲಿಡಲಾಗಿದೆ ಎಂದು ತಿಳಿದು ಬಂದಿದೆ.
ಈ ಪ್ರಕರಣದಲ್ಲಿ ಬಸವನಹಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಸೇರಿದಂತೆ ಮೂರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತ್ತು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೇ ಹಲಸುಮನೆ ದಲಿತ ಯುವಕನನ್ನು ಅನಧೀಕೃತವಾಗಿ ಠಾಣೆಯಲ್ಲಿಟ್ಟು ಆತನ ಮೇಲೆ ದೌರ್ಜನ್ಯ ನಡೆಸಿರುವ ಆರೋಪದಡಿಯಲ್ಲಿ ಆಲ್ದೂರು ಪೊಲೀಸ್ ಠಾಣೆಯ 5ಮಂದಿ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದಡಿಯಲ್ಲಿ ಅಮಾನತ್ತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಶೃಂಗೇರಿ ಠಾಣೆಯ ಪೊಲೀಸ್ ಸಿಬ್ಬಂದಿ ನಾಗಪ್ಪ ತುಕ್ಕಣ ಇತ್ತಿಚೆಗೆ ಬೆಂಗಳೂರಿನಲ್ಲಿ ನಡೆದ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆಯಲ್ಲಿ ಬೇರೊಬ್ಬ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ಕೇಂಗೇರಿ ಪೊಲೀಸರು ಆತನನ್ನು ಬಂಧಿಸಿ ಮೊಕದ್ದಮೆ ದಾಖಲಿಸಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಗೆ ವರದಿ ಸಲ್ಲಿಸಿದ್ದರು. ವರದಿ ಆಧಾರದ ಮೇಲೆ ಆತನನ್ನು ಅಮಾನತ್ತು ಮಾಡಲಾಗಿದೆ.
ಕೈಮರ ತನಿಖಾ ಠಾಣೆಗೆ ಕರ್ತವ್ಯಕ್ಕೆ ನಿಯೋಜನೆಗೊಳಿಸಿದ್ದ ಗ್ರಾಮಾಂತ ಠಾಣೆಯ ಪೋಲಿಸ್ ಕಾನ್ಸ್‍ಟೇಬಲ್ ರಾಜಾನಾಯ್ಕ, ಹಾಲೇನಹಳ್ಳಿ ತನಿಖಾ ಠಾಣೆಗೆ ಕರ್ತವ್ಯಕ್ಕೆ ನಿಯೋಜನೆಗೊಳಿಸಿದ್ದ ಮಂಗಲ್ ದಾಸ್ ಕರ್ತವ್ಯಲೋಪದಡಿ ಅಮಾನತ್ತು ಮಾಡಲಾಗಿದೆ.