Advertisement
ಕೋವಿಡ್ ನಡುವೆಯೂ ರಾಜ್ಯ ಸರ್ಕಾರ ಪದವಿ ಕಾಲೇಜು ಆರಂಭಕ್ಕೆಅನುಮತಿ ನೀಡಿದ್ದು, ಕಾಲೇಜಿಗೆ ಬರುವವಿದ್ಯಾರ್ಥಿಗಳು ಕೋವಿಡ್-19 ಪರೀಕ್ಷಾವರದಿ ಮತ್ತು ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯಗೊಳಿಸಿ ಕಾಲೇಜು ಆರಂಭಿಸಲಾಗಿದೆ. ಕಾಫಿನಾಡಿನಲ್ಲಿ 14 ಸರ್ಕಾರಿ ಪದವಿಕಾಲೇಜು, 3 ಅನುದಾನಿತ ಪದವಿ ಕಾಲೇಜುಗಳಿದ್ದು, ಸರ್ಕಾರಿ ಪದವಿ ಕಾಲೇಜಿನಲ್ಲಿ 5,897 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅನುದಾನಿತ ಪದವಿ ಕಾಲೇಜಿನಲ್ಲಿ 1,477 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕಾಲೇಜು ಆರಂಭಗೊಂಡು ಒಂದು ವಾರ ಕಳೆದರೂ ವಿದ್ಯಾರ್ಥಿಗಳು ಮಾತ್ರ ಕಾಲೇಜು ಕಡೆ ಮುಖ ಮಾಡದಿರುವುದು ವಿಪರ್ಯಾಸವಾಗಿದೆ.
Related Articles
Advertisement
ಈ ಹಿನ್ನೆಲೆಯಲ್ಲಿ ಆನ್‌ಲೈನ್ ತರಗತಿ ಅಷ್ಟೇನುಪರಿಣಾಮಕಾರಿಯಾಗುತ್ತಿಲ್ಲ, ಹೀಗಾಗಿತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಕೋವಿಡ್-19 ಪರೀಕ್ಷೆ: ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿ ಸೇರಿದಂತೆ ನ.22ರವರೆಗೆ 6,300ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೂ ಯಾರೊಬ್ಬರಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲವೆಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದೆ.
ಸೂಚನೆ ಪಾಲನೆ: ಕಾಲೇಜುಗಳಲ್ಲಿ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ. ಪ್ರತೀ ನಿತ್ಯ ಕಾಲೇಜುಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ವಿದ್ಯಾರ್ಥಿ ಗಳಲ್ಲಿ ಕೋವಿಡ್-19 ಜಾಗೃತಿ ಮೂಡಿಸಲಾಗುತ್ತಿದೆ. ಇಷ್ಟೆಲ್ಲ ಕ್ರಮಗಳನ್ನು ಕೈಗೊಂಡರೂ ಕೂಡ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೂ 6,300 ಕಾಲೇಜು ವಿದ್ಯಾರ್ಥಿಗಳು ಮತ್ತುಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. –ಡಾ| ಮಂಜುನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಆರೋಗ್ಯ ಇಲಾಖೆ
ಪದವಿ ಅಂತಿಮ ವರ್ಷದ ತರಗತಿಗಳು ಆರಂಭಗೊಂಡರೂ ಕಾಲೇಜಿಗೆ ಹಾಜರಾಗುತ್ತಿರುವವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಪದವಿ, ಸ್ನಾತಕೋತ್ತರ ಪದವಿಸೇರಿದಂತೆ ಐಡಿಎಸ್‌ಜಿ ಕಾಲೇಜಿನಲ್ಲಿ ಸುಮಾರು 1,000 ವಿದ್ಯಾರ್ಥಿಗಳಿದ್ದು,ಸದ್ಯ ಶೇ.5ರಷ್ಟು (100ರಿಂದ 150) ವಿದ್ಯಾರ್ಥಿಗಳು ಮಾತ್ರ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. –ಪ್ರೊ| ಕೆ.ಎನ್. ಲಕ್ಷ್ಮೀಕಾಂತ್, ಅರ್ಥಶಾಸ್ತ್ರ ಉಪನ್ಯಾಸಕರು ಸ್ನಾತಕೋತ್ತರ ಅಧ್ಯಯನ ವಿಭಾಗ