Advertisement
ತಾಪಂ ವ್ಯಾಪ್ತಿಯಲ್ಲಿ 96 ಕ್ಷೇತ್ರಗಳನ್ನು ಹೊಂದಿದ್ದರೆ, ಜಿಪಂ ವ್ಯಾಪ್ತಿಯಲ್ಲಿ 33 ಕ್ಷೇತ್ರಗಳನ್ನು ಒಳಗೊಂಡಿದೆ. ಚಿಕ್ಕಮಗಳೂರು ತಾಪಂ ವ್ಯಾಪ್ತಿಯ 15 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮೀಸಲಿಟ್ಟಿದ್ದು, ಮೂಡಿಗೆರೆಯ ತಾಪಂ ವ್ಯಾಪ್ತಿಯ 10 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಮೀಸಲಿಡಲಾಗಿದೆ. ಕೊಪ್ಪ ತಾಲೂಕಿನ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ಶೃಂಗೇರಿ ತಾಲೂಕಿನ 11ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ನರಸಿಂಹರಾಜಪುರ ತಾಲೂಕಿನ 11ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ಕಡೂರು ತಾಲೂಕಿನ 18 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಮೀಸಲಿರಿಸಲಾಗಿದೆ.
Related Articles
Advertisement
ಹಿಂದುಳಿದ ವರ್ಗ(ಎ)ಗೆ 1 ಸ್ಥಾನ ಪುರುಷ 1ಸ್ಥಾನ ಮಹಿಳೆಗೆ ಮೀಸಲು. ಸಾಮಾನ್ಯ ವರ್ಗಕ್ಕೆ 6 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲಿ 3 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಕಡೂರು ತಾಲೂಕು ವ್ಯಾಪ್ತಿಯಲ್ಲಿ ಬರುವ 18 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 3 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲು, ಪರಿಶಿಷ rಪಂಗಡ 1ಸ್ಥಾನ ಮಹಿಳೆಗೆ ಮೀಸಲು, ಹಿಂದುಳಿದ ವರ್ಗ(ಎ) 3 ಸ್ಥಾನಗಳಲ್ಲಿ 2 ಸ್ಥಾನ ಮಹಿಳೆಯರಿಗೆ, ಹಿಂದುಳಿದ ವರ್ಗ(ಬಿ) 1ಸ್ಥಾನ ಪುರುಷರಿಗೆ ಮೀಸಲು, ಸಾಮಾನ್ಯ ವರ್ಗಕ್ಕೆ 9 ಸ್ಥಾನಗಳನ್ನು ಮೀಸಲಿಟ್ಟಿದ್ದು 4 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ತರೀಕೆರೆ ತಾಲೂಕು ವ್ಯಾಪ್ತಿಯ 9 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 3 ಸ್ಥಾನಗಳಲ್ಲಿ 2 ಸ್ಥಾನ ಮಹಿಳೆಯರಿಗೆ, ಪರಿಶಿಷ್ಟ ಪಂಗಡ 1 ಸ್ಥಾನ ಮಹಿಳೆಯರಿಗೆ. ಸಾಮಾನ್ಯ ವರ್ಗಕ್ಕೆ 5 ಸ್ಥಾನ ಮೀಸಲಿಟ್ಟಿದು,ª ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಅಜ್ಜಂಪುರ ತಾಲೂಕು ವ್ಯಾಪ್ತಿಯ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 1ಸ್ಥಾನ ಮಹಿಳೆ 1ಸ್ಥಾನ ಪುರುಷರಿಗೆ, ಪರಿಶಿಷ್ಟ ಪಂಗಡ 1ಸ್ಥಾನ ಮಹಿಳೆಯರಿಗೆ, ಹಿಂದುಳಿವರ್ಗ(ಎ) 1ಸ್ಥಾನ ಮಹಿಳೆ, 1ಸ್ಥಾನ ಪುರುಷರಿಗೆ ಸಾಮಾನ್ಯ ವರ್ಗಕ್ಕೆ 6 ಸ್ಥಾನಗಳನ್ನು ಮೀಸಲಿಟ್ಟಿದ್ದು 3 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.
ಜಿಲ್ಲಾ ಪಂಚಾಯತ್: ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ 33 ಸ್ಥಾನಗಳ ಪೈಕಿ 17 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 8 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 4 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಹಿಂದುಳಿದ ವರ್ಗ(ಎ) 6 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 3 ಸ್ಥಾನಗಳನ್ನು ಮಹಿಳೆಯರಿಗೆ, ಹಿಂದುಳಿದ ವರ್ಗ(ಬಿ) 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 17 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 8 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.