Advertisement

ಕೊರೊನಾ ತಡೆಗೆ ಲಾಕ್‌ಡೌನ್‌ ಅನಿವಾರ್ಯ

09:58 PM May 26, 2021 | Team Udayavani |

ಚಿಕ್ಕಮಗಳೂರು: ಕೋವಿಡ್‌ ಸೋಂಕು ಹರಡುತ್ತಿದ್ದು, ಜನರ ಜೀವ ಮತ್ತು ಜೀವನದ ಪ್ರಶ್ನೆ ಯಾಗಿದೆ. ಸೋಂಕು ನಿಯಂತ್ರಣಕ್ಕೆ ಕಠಿಣ ಲಾಕ್‌ಡೌನ್‌ ಅನಿವಾರ್ಯವಾಗಿದ್ದು, ಜನ ಸಹಕರಿಸುವಂತೆ ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಮನವಿ ಮಾಡಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತ ಕಠಿಣ ಲಾಕ್‌ಡೌನ್‌ ಜಾರಿಗೊಳಿಸಿದ ಬಳಿಕ ಸೋಂಕಿನ ಪ್ರಮಾಣ ನಿಧಾನ ಗತಿ ಯಲ್ಲಿ ಕಡಿಮೆಯಾಗುತ್ತಿದೆ.

Advertisement

ಕಳೆದ 10-15 ದಿನಗಳ ಹಿಂದೆ ಇದ್ದ ಹಾಸಿಗೆ, ಆಕ್ಸಿಜನ್‌ ಬೇಡಿಕೆ ಈಗ ಕಡಿಮೆಯಾಗಿದೆ. ಕಠಿಣ ಲಾಕ್‌ಡೌನ್‌ನಿಂದ ಜನಸಾಮಾನ್ಯರು ಕೆಲವೊಂದು ತೊಂದರೆಗೆ ಒಳಗಾಗಿದ್ದಾರೆ. ಆದರೆ ಜೀವ-ಜೀವನದ ನಡುವೆ ಜೀವ ಉಳಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು. ಯಾವುದೇ ಸೋಂಕಿತರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅ ಧಿಕಾರಿಗಳು ಶ್ರಮಿಸುತ್ತಿದ್ದಾರೆ. ಜನರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿ ಜಿಲ್ಲಾಡಳಿತ ಕೆಲಸ ಮಾಡುತ್ತಿದೆ.

ಸೋಂಕಿತರು ಕಷ್ಟಕ್ಕೆ ಒಳಗಾಗದಂತೆ ಖಾಸಗಿ ಆಸ್ಪತ್ರೆಗಳಿಗೂ ನೆರವು ನೀಡಿ ಜೀವ ಉಳಿಸುವ ಕೆಲಸ ಮಾಡಿದ್ದೇವೆ ಸಾರ್ವಜನಿಕರು ಸಹಕರಿಸಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ 8 ಕಡೆಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ. ಕೇಂದ್ರಗಳಲ್ಲಿ ಓರ್ವ ವೈದ್ಯ, ಓರ್ವ ನರ್ಸ್‌ ನೇಮಕ ಮಾಡಲಾಗಿದೆ. ಸೋಂಕು ಗುಣಮುಖವಾಗುವರೆಗೂ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯಲು ಮುಂದಾಗಬೇಕು. ಮಂಗಳವಾರ ಹೆಚ್ಚಿನ ಸಂಖ್ಯೆ ಸೋಂಕಿತರು ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರು ತಿರುಗಾಡುತ್ತಿದ್ದಾರೆ ಎಂಬ ದೂರುಗಳು ಬಂದಿದ್ದು, ಸೋಂಕಿತರ ಮನೆಗಳಿಗೆ ಸ್ಟೀಕರ್‌ ಅಂಟಿಸಲಾಗುತ್ತಿದೆ. ಮನೆಯಿಂದ ಹೊರಬಂದು ತಿರುಗಾಡವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿ ಅವರಿಗೆ ಆತ್ಮಸೈ§ರ್ಯವನ್ನು ತುಂಬಲಾಗಿದೆ. ಆಶಾ ಕಾರ್ಯಕರ್ತೆಯರಿಗೆ ಏನೇನು ಸಮಸ್ಯೆಯಾಗುತ್ತಿದೆ ಎಂಬುದನ್ನು ತಿಳಿದುಕೊಂಡು ಪರಿಹರಿಸುವ ಕೆಲಸವನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗಳಿಗೆ ಭೇಟಿ ನೀಡಿ ಅಗತ್ಯವಿದ್ದವರಿಗೆ ಆ್ಯಂಬುಲೆನ್ಸ್‌ ವ್ಯವಸ್ಥೆ ಹಾಗೂ ಮೆಡಿಸಿನ್‌ ಕಿಟ್‌ ಗಳನ್ನು ನೀಡುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿ ಶೇ.70 ರಷ್ಟು ಆಶಾ ಕಾರ್ಯಕರ್ತೆಯರು ಕಾರ್ಯಪ್ರವೃತ್ತರಾಗಿದ್ದಾರೆ. ಪಂಚಾಯತ್‌ಗಳಿಗೆ ಭೇಟಿ ನೀಡಿ ಸರಿಪಡಿಸಲಾಗುವುದು ಎಂದ ಅವರು, ಪಿಡಿಒ ಗ್ರಾಮ ಪಂಚಾಯತ್‌ ಸದಸ್ಯರು ಕೋವಿಡ್‌ ನಿಯಂತ್ರಣಕ್ಕೆ ಸಹಕರಿಸುತ್ತಿದ್ದಾರೆ. ಜನರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು. ಯಾವ ಗ್ರಾಮ ಪಂಚಾಯತ್‌ಗಳಲ್ಲಿ ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿದೆ. ಆ ಗ್ರಾಮ ಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಗಮನ ಹರಿಸಲಾಗುವುದು ತಾಲೂಕು ಮಟ್ಟದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದ್ದು, ಕೇರ್‌ ಸೆಂಟರ್‌ಗಳಿಗೆ ಬೇಕಾಗುವ ಮೆಡಿಸಿನ್‌, ಆಯುಷ್‌ ಮೆಡಿಸಿನ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Advertisement

ಗ್ರಾಮೀಣ ಪ್ರದೇಶದ ಜನರಲ್ಲಿ ಇಂದಿಗೂ ಸೋಂಕಿನ ವಿಚಾರದಲ್ಲಿ ಉದಾಸೀನತೆ ಇದ್ದು, ಇದರಿಂದ ಸೋಂಕು ಹರಡುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೂ ಕೋವಿಡ್‌ ಜಾಗೃತಿ ಮೂಡಿಸಲಾಗುತ್ತಿದೆ. ಪಂಚಾಯತ್‌ ಅಭಿವೃದ್ಧಿ ಅ ಧಿಕಾರಿ, ಶಾಸಕರು, ಸಚಿವರು ಗ್ರಾಮೀಣ ಪ್ರದೇಶಗಳಲ್ಲಿ ಸಭೆಗಳನ್ನು ನಡೆಸಿ ಅರಿವು ಮೂಡಿಸಲಾಗುತ್ತಿದೆ. ಜನರು ಆತಂಕಕ್ಕೆ ಒಳಗಾಗುವುದು ಬೇಡ. ಸ್ವಯಂ ರಕ್ಷಣೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಮತ್ತು ಶಿಸ್ತು ಅಳವಡಿಸಿಕೊಳ್ಳಬೇಕು ಎಂದರು.

ಮೈಕ್ರೋ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ಒತ್ತಡ ಹೇರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಜನ ಸಂಕಷ್ಟದಲ್ಲಿದ್ದು ಸಂಸ್ಥೆಗಳಿಗೆ ತಿಳುವಳಿಕೆ ಪತ್ರಗಳನ್ನು ನೀಡಲಾಗುವುದು. ಸಾವಿರ ಲೀಟರ್‌ ಆಕ್ಸಿಜನ್‌ ಉತ್ಪಾದನೆ ಮಾಡುವ ಆಕ್ಸಿಜನ್‌ ಪ್ಲಾಟ್‌ ನಿರ್ಮಾಣಕ್ಕೆ ತ್ವರಿತಗತಿಯಲ್ಲಿ ಪ್ರಯತ್ನಿಸಲಾಗುತ್ತಿದೆ. ಗುಜರಾತ್‌ನಿಂದ ಯಂತ್ರ ಬರಬೇಕು ನಿರಂತರ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಮೆಡಿಕಲ್‌ ಕಾಲೇಜ್‌ಗೆ ಬೇಕಾಗುವ 31 ಸಿಬ್ಬಂದಿಗಳ ನೇಮಕ ಮಾಡಲು ಪ್ರಯತ್ನಿಸಲಾಗುತ್ತಿದೆ. ಮೆಡಿಕಲ್‌ ಕಾಲೇಜು ಕಟ್ಟಡ ಮತ್ತು ಆವರಣದಲ್ಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣಕ್ಕೆ ಶ್ರಮಿಸ ಲಾಗುತ್ತಿದ್ದು, ಇದರಿಂದ ಕೋವಿಡ್‌ ನಿರ್ವಹಣೆಗೆ ಅನುಸಕೂಲವಾಗಲಿದೆ ಎಂದರು.

ಸ್ಟೀರಾಯಿಡ್‌ ಮತ್ತು ಆಕ್ಸಿಜನ್‌ಗೆ ಡಿಸ್ಟೆಲ್‌ ವಾಟರ್‌ ಬಳಕೆ ಕಪ್ಪು ಶಿಲೀಂದ್ರ ರೋಗಕ್ಕೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತಿದ್ದು, ಆರೋಗ್ಯ ಇಲಾಖೆ ಅ ಧಿಕಾರಿಗಳು ಮತ್ತು ಸಿಬ್ಬಂ ಧಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಿದ್ದರಿಂದ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕಪ್ಪು ಶಿಲೀಂದ್ರ ರೋಗ ಸಮಸ್ಯೆ ಕಂಡುಬಂದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next