Advertisement

ಖಾಸಗಿ ಬಸ್- ಟ್ರ್ಯಾಕ್ಟರ್ ನಡುವೆ ಡಿಕ್ಕಿ:15 ಮಂದಿ ಪ್ರಯಾಣಿಕರಿಗೆ ಗಾಯ

10:00 AM Dec 16, 2019 | keerthan |

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಸಮೀಪ ಶನಿವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ‌ ಸಂಭವಿಸಿದೆ.

Advertisement

ಅಪಘಾತದ ವೇಳೆ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು ತಕ್ಷಣ ಗಾಯಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಯಿತು.

ಬಸ್ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಅಪಘಾತದ ರಭಸಕ್ಕೆ ಬಸ್ ಮುಂಭಾಗ ಜಖಂಗೊಂಡಿದೆ. ವಿಷಯ ತಿಳಿದ ಕೂಡಲೇ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ‌ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next