ಚಿಕ್ಕಬಳ್ಳಾಪುರ: ಕಾಯಕಲ್ಪ ಕಾರ್ಯಕ್ರಮದಡಿಯಲ್ಲಿ ಉತ್ತಮ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ನೀಡುವ 2019-20ನೇ ಸಾಲಿನಲ್ಲಿ ಕಾಯಕಲ್ಪ ಪ್ರಶಸ್ತಿಗೆ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆ ಸೇರಿ ಒಟ್ಟು 28 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಜಿಲ್ಲೆಯಿಂದ ಆಯ್ಕೆಯಾಗಿವೆ ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ತೃತೀಯ ಸ್ಥಾನದಲ್ಲಿದೆ.
ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಡಿಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರವು ಉತ್ತಮ ಪ್ರಶಸ್ತಿ ಪಡೆದುಕೊಂಡಿದ್ದು, ಉಳಿದ ಆಸ್ಪತ್ರೆಗಳು ಸಮಾಧಾನಕರ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಜಿಲ್ಲಾಧಿಕಾರಿ ಆರ್ ಲತಾ ಅವರು ಜಿಲ್ಲೆಯ ಎಲ್ಲಾ ಆರೋಗ್ಯ ಸಿಬ್ಬಂದಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಈ ಬಹುಮಾನ ದೊರಕಿರುವುದು ಹೆಮ್ಮೆಯ ಸಂಗತಿ ಜಿಲ್ಲಾ ಆಸ್ಪತ್ರೆಯಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲಾಗುತ್ತಿದ್ದು, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ ಸೌಲಭ್ಯಗಳು, ಸ್ವಚ್ಛತೆ, ಪರಿಸರ, ತ್ಯಾಜ್ಯ ನಿರ್ವಹಣೆ ಮೊದಲಾದ ವಿಷಯಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಶೇ 75.60 ರಷ್ಟು ಪಡೆದು ಪ್ರಥಮ ಸ್ಥಾನ ಪಡೆದಿದೆ.
ಕಾಯಕಲ್ಪ ಪ್ರಶಸ್ತಿಗೆ ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಬಾಗೇಪಲ್ಲಿ, ಸಮುದಾಯ ಆರೋಗ್ಯ ಕೇಂದ್ರ ಗೂಳೂರು, ಸಮುದಾಯ ಆರೋಗ್ಯ ಕೇಂದ್ರ ಬಟ್ಲಹಳ್ಳಿ, ಗೌರಿಬಿದನೂರಿನ ಮೆಟರ್ ನಲ್ ಚೈಲ್ಡ್ ಹೆಲ್ತ್ ಆಸ್ಪತ್ರೆ, ಕಂದವಾರ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಂಡಿಕಲ್, ದಿಬ್ಬೂರಹಳ್ಳಿ, ವಾಟದಹೊಸಹಳ್ಳಿ, ಬುರುಡುಗುಂಟೆ, ದಿಬ್ಬೂರು, ಅಲ್ಲೀಪುರ, ಇರಗಂಪಲ್ಲಿ, ಕುರುಬೂರು, ಈ ತಿಮ್ಮಸಂದ್ರ, ರಮಾಪುರ, ಮುದ್ದೇನಹಳ್ಳಿ, ಪೆರೇಸಂದ್ರ, ನಾಯನಹಳ್ಳಿ, ಯಗವಕೋಟೆ, ಮುರುಗುಮಲ್ಲ, ಕೆ.ಮುತ್ತುಕದಹಳ್ಳಿ, ಕುಂದಲಗುರ್ಕಿ, ಕುರುಡಿ, ಹಂಪಸಂದ್ರ, ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿವೆ.
ಕಳೆದ ವರ್ಷ ಜಿಲ್ಲೆಯಲ್ಲಿ ಕೇವಲ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಾತ್ರ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆಗೊಂಡಿದ್ದವು ಈ ವರ್ಷ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ ಸೇರಿ ಒಟ್ಟು 28 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಆಯ್ಕೆಗೊಂಡಿರುವುದು ಉತ್ತಮ ಸಾಧನೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಜನತೆಗೆ ಉತ್ತಮ ವೈದ್ಯಕೀಯ ಸೌಲಭ್ಯಗಳು ಸಿಗುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.
ಡಿಪಾಳ್ಯ ಉತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರ: ಗೌರಿಬಿದನೂರು ತಾಲ್ಲೂಕಿನ ಡಿಪಾಳ್ಯ ಪ್ರಾಥಮಿಕ ಕೇಂದ್ರ ಉತ್ತಮ ಆರೋಗ್ಯ ಕೇಂದ್ರ ಪ್ರಶಸ್ತಿ ಪಡೆದುಕೊಂಡಿದ್ದು, 2019-20ನೇ ಸಾಲಿನ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆಯಾಗಿರುವ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳಿಗೆ ಮತ್ತು ಕ್ವಾಲಿಟಿ ಅಶ್ಯೂರೆನ್ಸ್ ತಂಡಕ್ಕೆ ಜಿಲ್ಲಾಧಿಕಾರಿ ಆರ್ ಲತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಇಂದಿರಾ ಆರ್ ಕಬಾಡೆ, ಆರ್. ಸಿ.ಹೆಚ್ ಅಧಿಕಾರಿ ಡಾ. ಚನ್ನಕೇಶವರೆಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ರಮೇಶ್ ಬಾಬು, ಕ್ವಾಲಿಟಿ ಕೋ ಆರಿನೇಟರ್ ಡಾ. ಸಂತೋಷ್ ಬಾಬು, ಗುಣಮಟ್ಟದ ಭರವಸೆ ವ್ಯವಸ್ಥಾಪಕರಾದ ಹೈದರ್ ಆರೀಫ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.