Advertisement
ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ರಸ್ತೆಗೆ ಅಡ್ಡಲಾಗಿ ಬಂಡೆಗಳು ಉರುಳಿ ನಿಂತಿವೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಾಪಸ್ ಕಳುಹಿಸಲಾಗುತ್ತಿದೆ.
Related Articles
Advertisement
ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಮಣ್ಣು ತೆರವು ಕೆಲಸದಲ್ಲಿ ನಿರತರಾಗಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಭೂ ಕುಸಿತವಾಗಿರೋದು. ಮಲೆನಾಡು ಭಾಗದಲ್ಲಿ ಕಾಣಿಸುತ್ತಿದ್ದ ದೃಶ್ಯಗಳನ್ನ ತಮ್ಮಲ್ಲಿ ಆಗಿರೋದನ್ನು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.
ಕರೆ-ಕುಂಟೆಗಳು ಭರ್ತಿ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಒಂದು ಕಡೆ ನಂದಿಗಿರಿಧಾಮದಲ್ಲಿ ಭೂ ಕುಸಿತ ಕಂಡು ಬಂದರೇ ಮತ್ತೊಂದಡೆ ಗ್ರಾಮೀಣ ಪ್ರದೇಶದಲ್ಲಿ ನಿರ್ಮಿಸಿರುವ ಕೆರೆ-ಕುಂಟೆಗಳು ಭರ್ತಿಯಾಗಿ ಗಮನಸೆಳೆಯುತ್ತಿದೆ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಗೋಪಾಲ್ ಎಂಬುವರ ರೇಷ್ಮೆ ಬೆಳೆಗಾರರನ ಮನೆಗೆ ನೀರು ನುಗ್ಗಿ ರೇಷ್ಮೆ ಹುಳುಗಳು ನೀರು ಪಾಲಾಗಿ ಅಪಾರ ನಷ್ಟ ಸಂಭವಿಸಿದೆ.
ಇದನ್ನೂ ಓದಿ : ಎಚ್ಚರ 2022ರಲ್ಲೂ ಮತ್ತಷ್ಟು ಸಂಕಷ್ಟ…ಡೆಲ್ಟಾಗಿಂತಲೂ ಕೋವಿಡ್ 22 ಹೆಚ್ಚು ಅಪಾಯಕಾರಿ!