Advertisement

ಚಿಕ್ಕಬಳ್ಳಾಪುರ: ಗಾಂಧೀಜಿ ಬದುಕು ಬರಹದ ಕುರಿತು ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ

11:10 AM Oct 30, 2019 | Mithun PG |

ಚಿಕ್ಕಬಳ್ಳಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಸಾರ್ವಜನಿಕ ಬಸ್ ನಿಲ್ದಾಣ ಗಾಂಧೀಜಿ ಬದುಕು ಬರಹದ ಕುರಿತು ಮೂರು ದಿನಗಳ ಛಾಯಾಚಿತ್ರ ಪ್ರದರ್ಶನದ ಆಯೋಜಿಸಲಾಗಿದೆ.

Advertisement

ಛಾಯಾಚಿತ್ರ ಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಆರ್.ಲತಾ ಉದ್ಘಾಟಿಸಿದರು.

ಗಾಂಧೀಜಿ ರವರ ಹೋರಾಟದ ದಿನಗಳು, ಅವರ ವಿಚಾರಧಾರೆಗಳನ್ನು ಇಂದಿನ ವಿದ್ಯಾರ್ಥಿ, ಯುವ ಸಮಯದಾಯಕ್ಕೆ ಅರಿವು ಮೂಡಿಸುವ ದಿಸೆಯಲ್ಲಿ ಗಾಂಧೀಜಿರವರ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ವಿ.ಬಸವರಾಜ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್, ಜಿಲ್ಲಾ ಕೈಮಗ್ಗ ಹಾಗೂ ಜವಳಿ ಇಲಾಖೆ ಉಪ ನಿರ್ದೇಶಕ ಶಿವಕುಮಾರ್, ಚಿಂತಕ ಡಾ.ಕೋಡಿರಂಗಪ್ಪ, ವಾರ್ತಾ ಇಲಾಖೆ ಮೈನಾಶ್ರೀ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next