Advertisement

ಚಿಕ್ಕಬಳ್ಳಾಪುರ: ರಸ್ತೆ ಅಪಘಾತ; ಬೈಕ್ ಸವಾರ ಸಾವು

09:41 PM Oct 22, 2020 | mahesh |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 7 ರ ಚೆಂಡೂರು ಕ್ರಾಸ್ ಬಳಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.

Advertisement

ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರಿನ ತಬ್ರೇಜ್(27) ಮೃತಪಟ್ಟ ಬೈಕ್ ಸವಾರ. ವಾಹನ ಡಿಕ್ಕಿ ಹೊಡೆದು ಹೊರಟು ಹೋಗಿದೆ ಇದರಿಂದ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ.

ಈ ಸಂಬಂಧ ಗುಡಿಬಂಡೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಿಥುನ್‍ಕುಮಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next