Advertisement

ಚಿಕ್ಕಬಳ್ಳಾಪುರ: ದಾಖಲೆ ಇಲ್ಲದ 4.90 ಲಕ್ಷ ರೂ ಜಪ್ತಿ

09:50 AM Sep 25, 2019 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಬಳಿಕ ಮಾದರಿ ನೀತಿ ಸಂಹಿತೆಯ ಬಿಸಿ ಜನರಿಗೆ ತಟ್ಟಿದ್ದು ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4.90 ಲಕ್ಷ ರೂ, ಹಣವನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Advertisement

ಮಹಾರಾಷ್ಟ್ರ ಮೂಲದ ರಫೀಕ್ ಸಾಬೂದ್ದೀನ್ ಸೈಯದ್ ಎಂಬುವರ ಕಾರಿನಲ್ಲಿದ್ದ ಹಣವನ್ನು ದಾಖಲೆ ಇಲ್ಲದಿದ್ದಕ್ಕೆ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶ ಪಡೆದಿದ್ದಾರೆ.

ಚಿಂತಾಮಣಿಯಿಂದ ಚಿಕ್ಕಬಳ್ಳಾಪುರ ಮೂಲಕ ದೊಡ್ಡಬಳ್ಳಾಪುರಕ್ಕೆ ಹೋಗುತ್ತಿದ್ದಾಗ ಚಿಕ್ಕಬಳ್ಳಾಪುರ ತಾಲೂಕಿನ ಹೊಸವುಡ್ಯ ಸಮೀಪದ ಚೆಕ್ ಪೋಸ್ಟ್ ನಲ್ಲಿ ಕಾರು ಪರಿಶೀಲನೆ ಮಾಡಿದಾಗ ಹಣ ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next