Advertisement

Chikkaballapur;ಕೆರೆಗೆ ಧುಮುಕಿದ ಕಾರು: ನಾಲ್ವರು ಯುವಕರು ಮೃತ್ಯು

11:11 PM Dec 09, 2023 | Team Udayavani |

ಚಿಕ್ಕಬಳ್ಳಾಪುರ : ಇಲ್ಲಿನ ಬೈಪಾಸ್ ಬಳಿ ಇರುವ ಅಮಾನಿ ಬೈರಸಾಗರ ಕೆರೆಗೆ ಕಾರೊಂದು ಧುಮುಕಿದ ಪರಿಣಾಮ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಭೀಕರ ಅವಘಡ ಶನಿವಾರ ರಾತ್ರಿ ನಡೆದಿದೆ.

Advertisement

ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಅವಘಡ ನಡೆದಿದ್ದು, KA 03 MT 0761 ಸಂಖ್ಯೆಯ ಕಾರು ನಿಯಂತ್ರಣ ತಪ್ಪಿ ಕೆರೆಗೆ ಧುಮುಕಿದ್ದು ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಬೆಂಗಳೂರಿನಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಪೊಲೀಸರ ಸಮಕ್ಷಮದಲ್ಲಿ ನಾಲ್ವರ ಶವಗಳನ್ನು ಮೇಲಕ್ಕೆತ್ತಲಾಗಿದೆ. ನಾಲ್ವರ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next