Advertisement

ಚಿಕ್ಕಬಳ್ಳಾಪುರ ಸ್ಪೋಟ ಪ್ರಕರಣ: ಗುಡಿಬಂಡೆ ಇನ್ಸ್ ಪೆಕ್ಟರ್ ಮತ್ತು ಪಿಎಸ್ಐ ಅಮಾನತು

04:01 PM Feb 24, 2021 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವಲ್ಲಿ ಬಳಿ ಫೆ.22 ರಂದು ರಾತ್ರಿ ಜಿಲೆಟಿನ್ ಸ್ಪೋಟಗೊಂಡು ಆರು ಜನ ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್  ಮಂಜುನಾಥ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ಐ) ಗೋಪಲ ರೆಡ್ಡಿ ಅವರನ್ನು ಅಮಾನತು ಮಾಡಿ ಎಸ್.ಪಿ.ಮಿಥುನ್ ಕುಮಾರ್ ಆದೇಶಿಸಿದ್ದಾರೆ.

Advertisement

ಫೆ.7 ರಂದು ಕ್ರಷರ್ ಹಾಗೂ ಕ್ವಾರಿ ಮಾಲೀಕರ ವಿರುದ್ದ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಕರ್ತವ್ಯ ಲೋಪವಾಗಿರುವ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಕಳೆದುಹೋದ ಮರ್ಯಾದೆ ಮತ್ತೆ ಬರುವಂತೆ ದುರ್ಗಾ ದೇವಿಗೆ ಪತ್ರ ಬರೆದು ಬೇಡಿಕೊಂಡ ಭಕ್ತ!

ಜಿಲೆಟಿನ್ ಸ್ಪೋಟ ಸಂಭವಿಸದ ಹಿರೇನಾಗವಲ್ಲಿ ಪ್ರದೇಶ ಚಿಕ್ಕಬಳ್ಳಾಪುರ ತಾಲ್ಲೂಕಿಗೆ ಸೇರಿದ್ದರೂ ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಪಡಿಸಲಾಗಿದೆ.

ಇದನ್ನೂ ಓದಿ:ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next