Advertisement

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ಎಂ.ರಾಜಣ್ಣ

01:54 PM Dec 08, 2020 | mahesh |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷದಕ್ಕೆ ಸೇರ್ಪಡೆಯಾದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ರಾಜಣ್ಣ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಮುಖ್ಯಮಂತ್ರಿಗಳನ್ನು ಮಾಜಿ ಶಾಸಕರು ಭೇಟಿ ಮಾಡಿದರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಶಾಸಕರನ್ನು ಸಿಎಂ ಯಡಿಯೂರಪ್ಪ ಅಭಿನಂದಿಸಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಜನಸೇವೆ ಮಾಡಿ ಪಕ್ಷ ಸಂಘಟನೆ ಮಾಡಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಅಬ್ಲೂಡು ಗ್ರಾಪಂ ಮಾಜಿ ಅಧ್ಯಕ್ಷ ಕೆ.ಎಸ್.ಕನಕಪ್ರಸಾದ್,ಕುಂದಲಗುರ್ಕಿ ಗ್ರಾಪಂ ಮಾಜಿ ಉಪಾಧ್ಯಕ್ಷ ಆಂಜಿನಪ್ಪ,ಯುವ ಮುಖಂಡ ಭರತ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next