ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವಲ್ಲಿ ಬಳಿ ಜಿಲೆಟಿನ್ ಸ್ಪೋಟಗೊಂಡು ಆರು ಜನ ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕ್ವಾರಿ ಮಾಲೀಕ ನಾಗರಾಜ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನೆರೆಯ ತಮಿಳುನಾಡಿನ ಹೊಸೂರು ಬಳಿ ಆರೋಪಿ ನಾಗರಾಜ್ ಹಾಗೂ ಬ್ಲಾಸ್ಟರ್ ಗಣೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಬುಧವಾರ ಕ್ವಾರಿ ಮಾಲೀಕರಾದ ರಾಘವೇಂದ್ರ ರೆಡ್ಡಿ ಹಾಗೂ ವೆಂಕಟಶಿವಾರೆಡ್ಡಿ ಸಹಿತ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಘಟನೆಗೆ ಸಂಬಂಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರ ಸ್ಪೋಟ ಪ್ರಕರಣ: ಗುಡಿಬಂಡೆ ಇನ್ಸ್ ಪೆಕ್ಟರ್ ಮತ್ತು ಪಿಎಸ್ಐ ಅಮಾನತು
ಫೆಬ್ರವರಿ 7 ಪ್ರಕರಣ ದಾಖಲಿಸಿದರೂ ಸಹ ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ ಮತ್ತು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಗುಡಿಬಂಡೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಂಜುನಾಥ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ಐ) ಗೋಪಾಲ ರೆಡ್ಡಿ ಅವರನ್ನು ಅಮಾನತು ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಇದನ್ನೂ ಓದಿ:ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆವಾಹನೆ ? ವಿಡಿಯೋ ವೈರಲ್