Advertisement

Chikkaballapura; ಸಿದ್ದರಾಮಯ್ಯ ಪರ ಪ್ರತಿಭಟನೆಯಿಂದ ದೂರ ಉಳಿದ ಶಾಸಕ ಪ್ರದೀಪ್ ಈಶ್ವರ್

12:57 PM Aug 19, 2024 | Team Udayavani |

ಚಿಕ್ಕಬಳ್ಳಾಪುರ: ಮೈಸೂರು ಮೂಡಾ ಹಗರಣ ಸಂಬಂದ ಮುಖ್ಯಮಂತ್ರಿಗಳ ವಿರುದ್ದ ವಿಚಾರಣೆಗೆ ಆದೇಶಿಸಿರುವ ರಾಜ್ಯಪಾಲರ ವಿರುದ್ದ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಿಂದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೂರ ಉಳಿದಿದ್ದಾರೆ.

Advertisement

ಇಡೀ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯಪಾಲರ ವಿರುದ್ದ ಪ್ರತಿಭಟನೆಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಕಡ್ಡಾಯವಾಗಿ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು, ಸಂಸದರು ಪಾಲ್ಗೊಳ್ಳಲುವಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸೂಚಿಸಿದ್ದಾರೆ. ಆದರೆ ಚಿಕ್ಕಬಳ್ಳಾಪುರ ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಿಂದ ಸ್ಥಳೀಯ ಶಾಸಕರಾದ ಪ್ರದೀಪ್ ಈಶ್ವರ್ ಹಾಗೂ ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ದೂರ ಉಳಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪ್ರತಿಭಟನೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಗೌರಿಬಿದನೂರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಮಾಜಿ ಸಚಿವರಾದ ಎಂ.ಆರ್.ಸೀತಾರಾಮ್, ವಿ.ಮುನಿಯಪ್ಪ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ. ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಕೆ.ವಿ.ಅನುಸೂಯಮ್ಮ, ಕೆ.ಪಿ.ಬಚ್ಚೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next