Advertisement

Chikkaballapur: ಚಿಕ್ಕಬಳ್ಳಾಪುರ -ಮುಳಬಾಗಿಲು ಚತುಷ್ಪಥ ರಸ್ತೆ?

02:07 PM Aug 17, 2023 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಿಂದ ವಯಾ ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸಪುರ‌ದಿಂದ ಮುಳಬಾಗಿಲುವರೆಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಕಾರ್ಯ ಸಾಧ್ಯತಾ ವರದಿ ತಯಾರಿಸಲು ಈ ವರ್ಷ ಟೆಂಡರ್‌ ಕೆರೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.

Advertisement

ಹೌದು, ಈಗಾಗಲೇ ಜಿಲ್ಲೆಯಲ್ಲಿ ಹೋಗಿರುವ ತುಮಕೂರು ಜಿಲ್ಲೆಯ ಶಿರಾ- ಕೋಲಾರ ಜಿಲ್ಲೆಯ ಮುಳಬಾಗಿಲು ವರೆಗಗಿನ ರಾಷ್ಟ್ರೀಯ ಹೆದ್ದಾರಿ 234ನ್ನು ಮೇಲ್ದಜೇìಗೇರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು. ಹಾಲಿ ಇರುವ ಹೆದ್ದಾರಿಯನ್ನು (ನಾಲ್ಕು ಲೈನ್‌) ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲು ಮುಂದಾಗಿದೆ.

ಜಿಲ್ಲೆಯಲ್ಲಿ ವಾಣಿಜ್ಯ ಕೇಂದ್ರವಾಗಿ ಬೆಳೆಯುತ್ತಿರುವ ಚಿಂತಾಮಣಿ ಹಾಗೂ ರೇಷ್ಮೆ ನಗರಿ ಶಿಡ್ಲಘಟ್ಟ ತಾಲೂಕನ್ನು ಗಮನದಲ್ಲಿ ಇರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಹೆಚ್ಚುತ್ತಿರುವ ವಾಹನಗಳ ಸಂಚಾರ ದಟ್ಟಣೆ ಹಾಗೂ ಬರುವ ದಿನಗಳಲ್ಲಿ ಚಿಂತಾಮಣಿ, ಚಿಕ್ಕಬಳ್ಳಾಪುರ ತಾಲೂಕುಗಳಲ್ಲಿ ಕೈಗಾರಿಕಾ ಅಭಿವೃದ್ಧಿ ಗಮನದಲ್ಲಿಟ್ಟು ಕೊಂಡು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಮುಳ¸ ಾಗಿಲುವರೆಗಿನ ಹಾಲಿ ಇರುವ ರಾಷ್ಟ್ರೀಯ ಹೆದ್ದಾರಿ ಯನ್ನು ಚತುಷ್ಪಥ ಹೆದ್ದಾರಿಯಾಗಿ ಪರಿವರ್ತಿಸಿ   ದರೆ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗು ತ್ತದೆಯೆಂಬ ಹಿನ್ನಲೆಯಲ್ಲಿ ಕಾರ್ಯ ಸಾಧ್ಯತಾ ವರದಿ ತಯಾರಿಸಲು ಕೇಂದ್ರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

82 ಕಿ.ಮೀ ಹೆದ್ದಾರಿ: ಚಿಕ್ಕಬಳ್ಳಾಪುರದಿಂದ ವಯಾ ಶಿಡ್ಲಘಟ್ಟ, ಚಿಂತಾಮಣಿ ಮೂಲಕ ಮುಳಬಾಗಿಲುವರೆಗೂ ಒಟ್ಟು 82 ಕಿ.ಮೀ ಅಂತರ ಇದ್ದು ಹಾಲಿ ಇರುವ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಸಾಧ್ಯವಿದೆಯೆ? ಸದ್ಯ ಹಾಲಿ ಇರುವ ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ಹೇಗಿದೆ? ಭೂ ಸ್ವಾಧೀನ ಅಗತ್ಯ ಇದೆಯೆ? ಮತ್ತಿತರ ಸಾಧಕ ಭಾದಕಗಳ ಕುರಿತು ಸಮಗ್ರವಾದ ಕಾರ್ಯ ಸಾಧ್ಯತಾ ವರದಿಯನ್ನು ತಯಾರಿಸಲು ಈ ವರ್ಷವೇ ಹೆದ್ದಾರಿ ಪ್ರಾಧಿಕಾರ ಟೆಂಡರ್‌ ಕರೆಯಲು ನಿರ್ಧರಿಸಿದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದ ಸಚಿವ ಎಂ.ಸಿ.ಸುಧಾಕರ್‌:

Advertisement

ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದಜೇìಗೇರಿಸುವ ಸಂಬಂಧ ಇತ್ತೀಚೆಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿರನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ದೆಹಲಿಯಲ್ಲಿ ಭೇಟಿ ಮಾಡಿ ಜಿಲ್ಲೆಯಲ್ಲಿ ಆಗಬೇಕಾದ ಹೆದ್ದಾರಿ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿ ಬಂದಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು.

ಚಿಕ್ಕಬಳ್ಳಾಪುರ ಹಾಗೂ ಮುಳಬಾಗಿಲು ನಡುವೆ ಸುಮಾರು 82 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಕಾರ್ಯ ಸಾಧ್ಯತಾ ವರದಿ ತಯಾರಿಸಲು ಈ ವರ್ಷ ಟೆಂಡರ್‌ ಕರೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಸಿಕ್ಕ ಬಳಿಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಎಂ.ಮಲ್ಲಿಕಾರ್ಜುನ್‌, ಸಹಾಯಕ ಕಾರ್ಯಪಾಲಕ ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ.

ಜಿಲ್ಲೆಯಿಂದ ಅಂತರ ಜಿಲ್ಲೆ, ರಾಜ್ಯಕ್ಕೆ ಸ‌ಂಪರ್ಕ

ಈಗಾಗಲೇ ಮಧುಗಿಯಿಂದ ಗೌರಿಬಿದನೂರ ವರೆಗೂ ರಾಷ್ಟ್ರೀಯ ಹೆದ್ದಾರಿ 234 ಅಗಲೀಕರಣ ಕಾಮಗಾರಿ ಭರದಿಂದ ಸಾಗಿದೆ. ಕಾಮಗಾರಿ ಪೂರ್ಣಗೊಳಿಸಲು 24 ತಿಂಗಳು ಗಡವು ಕೊಡ ಲಾಗಿದೆ. ಜಿಲ್ಲೆಯಿಂದ ಶಿರಾ ಸಂಪರ್ಕ ಕಲ್ಪಿಸುವ ಹೆದ್ದಾರಿಯು ಚಿಕ್ಕಬಳ್ಳಾಪುರದಿಂದ ವಯಾ ಚಿಂತಾ ಮಣಿ, ಮುಳಬಾಗಿಲು ಮೂಲಕ ಆಂಧ್ರಕ್ಕೆ ಸಂಪರ್ಕ ಕಲ್ಪಿಸಿದರೆ ಜಿಲ್ಲೆಯ ಕೃಷಿ, ತೋಟಗಾರಿಕೆ ಬೆಳೆಗಳ ಸಾಗಾಟ ಸೇರಿದಂತೆ ಕೈಗಾರಿಕಾ ಅಭಿವೃದ್ಧಿಗೆ ಅನುಕೂಲ ಕಲ್ಪಿಸುವ ದೃಷ್ಠಿಯಿಂದ ಚಿಂತಾಮಣಿ ಯಿಂದ ಮುಳಬಾಗಿಲುವರೆಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಆಸಕ್ತಿ ತೋರಿದೆ.

- ಕಾಗತಿ ನಾಗರಾಜಪ್ಪ

Advertisement

Udayavani is now on Telegram. Click here to join our channel and stay updated with the latest news.

Next