ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ರೈತರ ಹೊಲದಲ್ಲಿ ಸಾಮೂಹಿಕವಾಗಿ ನವಿಲುಗಳು ಸಾವಿನಪ್ಪಿದ್ದು ಇದರಿಂದ ಹಲವು ರೀತಿಯ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಗ್ರಾಮದ ತಿರುಮಲದಿನ್ನೆ ಪ್ರದೇಶದಲ್ಲಿ ನವಿಲುಗಳು ಸತ್ತಿರುವುದನ್ನು ಕಂಡು ಸ್ಥಳೀಯ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ನವಿಲುಗಳ ಸಾವಿಗೆ ಕಾರಣ ಏನು ಎಂಬುದರ ಬಗ್ಗೆ ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.
ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಆದರೂ ವಿಷ ಮಿಶ್ರಿತ ಆಹಾರ ಅಥವಾ ನೀರು ಸೇವಿಸಿರುವುದು ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಮನೆ ಮೇಲೆ ದಾಳಿ ಮಾಡಲು ಬಂದ ಅರಣ್ಯಾಧಿಕಾರಿಗಳನ್ನು 2 ಗಂಟೆ ಕೂಡಿ ಹಾಕಿದ ಗ್ರಾಮಸ್ಥರು
ಬೈರಗಾನಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನವಿಲುಗಳು ಹೆಚ್ಚಾಗಿ ಕಂಡು ಬಂದಿದ್ದು, ಮತ್ತೊಂದೆಡೆ ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದರಿಂದ ಪರಿಸರ ಪ್ರೇಮಿಗಳು ಕಳವಳ ವ್ಯಕ್ತಪಡಿಸಿದ್ದಾರೆ.