ಶಿಡ್ಲಘಟ್ಟ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಜಲಮೂಲಗಳನ್ನು ಸಂರಕ್ಷಣೆ ಮಾಡುವ ಜೊತೆಗೆ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಅಭಿವೃದ್ದಿಗೊಳಿಸಿರುವುದಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಪಂ ಆಡಳಿತ ಅಧಿಕಾರಿ ಮನೋಜ್‍ಕುಮಾರ್ ಮೀನಾ ಮೆಚ್ಚಿಗೆ ವ್ಯಕ್ತಪಡಿಸಿದರು.
ಜಿಲ್ಲೆಯ ನಾಯನಹಳ್ಳಿ ಗ್ರಾಮದಲ್ಲಿ ಮಜಿನರೇಗಾ ಯೋಜನೆಯಡಿ ಮಾದರಿಯಾಗಿ ನಿರ್ಮಿಸಿರುವ ಸರ್ಕಾರಿ ಶಾಲೆ ಮತ್ತು ಉದ್ಯಾನವನವನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳನ್ನು ಮಾದರಿಯಾಗಿ ಅಭಿವೃದ್ದಿಗೊಳಿಸಲಾಗಿದ್ದು ಪೋಷಕರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದರು ನಂತರ ಚಿಕ್ಕಬಳ್ಳಾಪುರ ಶಿಡ್ಲಘಟ್ಟ ಮಾರ್ಗ ಮಧ್ಯೆ ಇರುವ ಹೊಸಹುಡ್ಯ ಗ್ರಾಮದಲ್ಲಿ ಮಂಜುನಾಥ್ ಎಂಬುವರ ರೈತರ ತೋಟಕ್ಕೆ ಭೇಟಿ ನೀಡಿ ಕೃಷಿ ಇಲಾಖೆ ಅಭಿವೃದ್ದಿಗೊಳಿಸಿರುವ ಆಪ್ ಮೂಲಕ ಬೆಳೆ ಸಮೀಕ್ಷೆ ಮತ್ತು ರಾಗಿಯನ್ನು ಮಾರಾಟ ಮಾಡಿ ಬೆಲೆ ಸಿಕ್ಕಿದೆಯೇ ಎಂಬುದರ ಬಗ್ಗೆ ರೈತನೊಂದಿಗೆ ಉಸ್ತುವಾರಿ ಕಾರ್ಯದರ್ಶಿಗಳು ಸಮಾಲೋಚನೆ ನಡೆಸಿದರು.
ಇದನ್ನೂ ಓದಿ : ಕೋವಿಡ್: ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 3045 ಸೋಂಕಿತರು ಗುಣಮುಖ
ನಂತರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಆನೂರು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿ ಮಜಿ ನರೇಗಾ ಯೋಜನೆಯ ಮೂಲಕ ನಿರ್ಮಿಸಿರುವ ಮಾದರಿ ಅಂಗನವಾಡಿ ಕೇಂದ್ರವನ್ನು ವೀಕ್ಷಿಸಿ ಬಳಿಕ ಬೆಳ್ಳೂಟಿ ಗ್ರಾಮದಲ್ಲಿ ಮಾದರಿಯಾಗಿ ನಿರ್ಮಿಸಿರುವ ಕಲ್ಯಾಣಿ ಉದ್ಯಾನವನ ಮತ್ತು ನಿರ್ಮಾಣ ಹಂತದಲ್ಲಿರುವ ಶಾಲಾ ಕಾಮಗಾರಿಯನ್ನು ಪರಿಶೀಲಿಸಿ ಸಂತಸ ವ್ಯಕ್ತಪಡಿಸಿದರು. ಇತ್ತೀಚೆಗೆ ಸುರಿಯುತ್ತಿರುವ ಸುರಿಯುತ್ತಿರುವ ಮಳೆಯಿಂದ ಕಲ್ಯಾಣಿ ತುಂಬಿತುಳಕಾಡುತ್ತಿದ್ದನ್ನು ನೋಡಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹರ್ಷ ವ್ಯಕ್ತಪಡಿಸಿ ಇದರಿಂದ ಅಂರ್ತಜಲಮಟ್ಟ ಹೆಚ್ಚಳಗೊಳ್ಳುವ ಜೊತೆಗೆ ಗ್ರಾಮಸ್ಥರಿಗೆ ನೀರು ಸರಬರಾಜು ಮಾಡಲು ಅನುಕೂಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಪಿ.ಶಿವಶಂಕರ್,ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್,ಶಿಡ್ಲಘಟ್ಟ ತಾಪಂ ಇಓ ಚಂದ್ರಕಾಂತ್, ಆನೂರು ಗ್ರಾಪಂ ಅಧ್ಯಕ್ಷೆ ನೇತ್ರಾವತಿ, ಉಪಾಧ್ಯಕ್ಷ ವಿಜೇಂದ್ರ, ಗ್ರಾಪಂ ಸದಸ್ಯರಾದ ಲತಾ ದೇವರಾಜ್, ಪ್ರೇಮಾ ಆನಂದ್, ಪಿಡಿಓ ಕಾತ್ಯಾಯಿನಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : 40 ವರ್ಷಗಳ ಹಿಂದೆ ಭಾರತಕ್ಕೆ ವಲಸೆ ಬಂದ ಐವರು ಪಾಕ್ ನಿರಾಶ್ರಿತರಿಗೆ ಭಾರತದ ಪೌರತ್ವ