Advertisement
ಕೇವಲ 20 ದಿನಗಳಲ್ಲಿ ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಕೇಲವೇ ದಿನಗಳಲ್ಲಿ ಸೋಂಕಿತರ ಸಂಖ್ಯೆ ಎರಡು ಸಾವಿರ ದಾಟುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿಯೆ ಅತಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿದ್ದು ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸೋಂಕಿತರ ಪ್ರಮಾಣ ಸಾವಿರ ದಾಟುವ ಎಲ್ಲಾ ಲಕ್ಷಣಗಳು ಇವೆ. ಹೊಸದಾಗಿ 82 ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 50, ಬಾಗೇಪಲ್ಲಿ 2, ಚಿಂತಾಮಣಿ 10, ಗೌರಿಬಿದನೂರು 6, ಶಿಡ್ಲಘಟ್ಟದಲ್ಲಿ 14 ಪ್ರಕರಣಗಳು ಕಂಡು ಬಂದಿವೆ.
ಒಟ್ಟಾರೆ ಸೋಂಕಿತರಲ್ಲಿಂದು 46 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇದುವರೆಗೂ ಒಟ್ಟು 1,086 ಮಂದಿ ಕೋವಿಡ್-19ನಿಂದ ಚೇತರಿಕೆ ಕಂಡು ಬಿಡುಗಡೆಗೊಂಡಿದ್ದಾರೆ. ಇನ್ನೂ 609 ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರಿಯವಾಗಿವೆ. ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ ಈಗ ಬಹುತೇಕನ್ನು ಹೋಮ್ ಕ್ವಾರೆಂಟೈನ್‌ನಲ್ಲಿಯೆ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಮತ್ತೆ ಕೆಲವರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 1,729 ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ 614, ಬಾಗೇಪಲ್ಲಿ 215, ಚಿಂತಾಮಣಿ 275, ಗೌರಿಬಿದನೂರು 384, ಗುಡಿಬಂಡೆ 85, ಶಿಡ್ಲಘಟ್ಟದಲ್ಲಿ 156 ಪ್ರಕರಣಗಳು ದಾಖಲಾಗಿವೆ.