Advertisement

ಒಂದೇ 15 ಜನರಿಗೆ ಸೋಂಕು : ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಹೆಚ್ಚಿದ ಕೋವಿಡ್ ಪ್ರಕರಣ

09:35 PM Jul 27, 2022 | Team Udayavani |

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದ್ದ ಕೊರೊನಾ ಸೋಂಕು ಮತ್ತೊಮ್ಮೆ ಸ್ಪೋಟಗೊಂಡಿದ್ದು ಇಂದು ಬರೋಬರಿ 15ಮಂದಿ ಕೊರೊನಾ ಸೋಂಕು ತೆಗಲಿದೆ.

Advertisement

ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದು ನಾಗರಿಕರಲ್ಲಿ ಆತಂಕ ಮನೆಮಾಡಿದೆ ಜಿಲ್ಲೆಯ ವಾಣಿಜ್ಯ ನಗರ ಚಿಂತಾಮಣಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದೆ.

ಚಿಂತಾಮಣಿ ತಾಲೂಕಿನಲ್ಲಿ ಈಗಾಗಲೇ ಡೆಂಗಿ ಜ್ವರದ ಭೀತಿ ಆವರಿಸಿದ್ದು ಮತ್ತೊಂದೆಡೆ ತಾಲೂಕಿನಲ್ಲಿಂದು 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ತಾಲೂಕಿನಲ್ಲಿ ತಲಾ ಮೂರು ಪ್ರಕರಣಗಳು ಕಾಣಿಸಿಕೊಂಡಿದೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು ನಾಗರಿಕರು ಕೋವಿಡ್ 19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 9 ಮಹಿಳೆಯರು ಆರು ಜನ ಪುರುಷರಿಗೆ ಕೊರೊನಾ ಸೋಂಕು ತೆಗಲಿದೆ.

ಆ ಪೈಕಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಒರ್ವ ಮಹಿಳೆ,ಇಬ್ಬರು ಪುರುಷರು, ಚಿಂತಾಮಣಿ ತಾಲೂಕಿನಲ್ಲಿ 7 ಮಹಿಳೆಯರು ಇಬ್ಬರು ಪುರುಷರು ಹಾಗೂ ಗೌರಿಬಿದನೂರು ತಾಲೂಕಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

Advertisement

ಜಿಲ್ಲೆಯಲ್ಲಿ ಪ್ರಸ್ತುತ 32 ಸಕ್ರೀಯ ಕೊರೋನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದುವರೆಗೆ 55694 ಜನಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತು ಆ ಪೈಕಿ 55200 ಜನ ಚೇತರಿಸಿಕೊಂಡಿದ್ದಾರೆ ಒಟ್ಟು 461 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದನ್ನು ಓದಿ : ಪ್ರವೀಣ್ ಅಂತಿಮ ದರ್ಶನಕ್ಕೆ ಆಗಮಿಸಿದ Nalin Kumar Kateelಗೆ ದಿಕ್ಕಾರದ ಸ್ವಾಗತ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿನಿತ್ಯ 300 ಜನರಿಗೆ ಆರೋಗ್ಯ ತಪಾಸಣೆ ಮಾಡಬೇಕೆಂದು ಇಲಾಖೆಯಿಂದ ಸೂಚನೆ ಬಂದಿದ್ರು ಸಹ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿನಿತ್ಯ 600 ರಿಂದ 700 ಜನಗಳಿಗೆ ಆರೋಗ್ಯ ತಪಾಸನೆ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಆರೋಗ್ಯ ಇಲಾಖೆಯ ತಂಡವು ಸಹ ಜಿಲ್ಲೆಗೆ ಆಗಮಿಸಿದೆ ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿದ್ದು ಗರ್ಭಿಣಿ ಮಹಿಳೆ ಒಬ್ಬರಿಗೆ ಸಹ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು ಆಕೆಯನ್ನು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಗೆ ಕಳುಹಿಸಿ ಹೆರಿಗೆಯನ್ನು ಮಾಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.

ಇದನ್ನು ಓದಿ : ಬಿಜೆಪಿ ಸೇರುವುದಕ್ಕೂ ಸಿದ್ಧವಿದ್ದೆ: ಮಾಜಿ ಸಿಎಂ ಉದ್ಧವ್‌ ಠಾಕ್ರೆ ಹೇಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು ಒಟ್ಟು 730 ಜನರ ಆರೋಗ್ಯವನ್ನು ತಪಾಸಣೆ ಮಾಡಲಾಗಿದ್ದು ಆಪಲ್ಕಿ 11 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಮೂರು ಚಿಂತಾಮಣಿ ತಾಲೂಕಿನಲ್ಲಿ ಆರು ಹಾಗೂ ಗೌರಿಬಿದನೂರು ತಾಲೂಕಿನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ನಾಗರಿಕರು ಸಹ ಸಹಕರಿಸಬೇಕು.

– ಡಾ. ಮಹೇಶ್ ಕುಮಾರ್ ಡಿಹೆಚ್‌ಓ ಚಿಕ್ಕಬಳ್ಳಾಪುರ

Advertisement

Udayavani is now on Telegram. Click here to join our channel and stay updated with the latest news.

Next