ಚಿಕ್ಕಬಳ್ಳಾಪುರ: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಸಾಗಿಸಿ ಬಳಿಕ ಆಂಬುಲೆನ್ಸ್ ನಲ್ಲಿ ಜಿಲ್ಲಾಸ್ಪತ್ರೆಗೆ ರವಾನಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಇಂದಿರಾ ಆರ್ ಕಬಾಡೆ ಅವರು ಬಾಗೇಪಲ್ಲಿ ತಾಲೂಕಿನ ಪಾರ್ವತಿಪುರ ತಾಂಡಾಕ್ಕೆ ಭೇಟಿ ನೀಡಿ ವಾಪಸ್ ಬರುತ್ತಿದ್ದರು. ಈ ವೇಳೆಯಲ್ಲಿ ವರ್ಲಕೊಂಡ ಬಳಿ ಅಪಘಾತದ ನರಳುತ್ತಿದ್ದ ಗಾಯಗೊಂಡ ವ್ಯಕ್ತಿಯನ್ನು ಕಂಡು ತಕ್ಷಣ ತಮ್ಮ ವಾಹನದ ಮೂಲಕ ಸಮೀಪದ ಆಸ್ಪತ್ರೆಗೆ ಆ ವ್ಯಕ್ತಿಯನ್ನು ಸಾಗಿಸಿದ್ದಾರೆ.
ಇದನ್ನೂ ಓದಿ:ದನ ಕಟ್ಟಿ ಹಾಕುವ ವಿಚಾರ: ಮಗನನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
ನಂತರ 108 ತುರ್ತು ವಾಹನದ ಮೂಲಕ ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಂಬುಲೆನ್ಸ್ ಬರುವವರೆಗೆ ಕಾಯದೆ ತಮ್ಮ ವಾಹನದಲ್ಲಿಯೇ ಗಾಯಗೊಂಡಿರುವ ವ್ಯಕ್ತಿಯನ್ನು ಪ್ರಥಮ ಚಿಕಿತ್ಸೆ ನೀಡುವ ಸಲುವಾಗಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ ಡಿಎಚ್ಓ ಅವರ ಕಾರ್ಯವೈಖರಿಯನ್ನು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.