Advertisement

Chikkaballapura; ವಿದ್ಯಾರ್ಥಿ ಜೊತೆ ಅಸಭ್ಯ ವರ್ತನೆ: ಮುಖ್ಯ ಶಿಕ್ಷಕಿ ಅಮಾನತು

05:45 PM Dec 28, 2023 | Team Udayavani |

ಚಿಕ್ಕಬಳ್ಳಾಪುರ: ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವಿವಿಧ ಭಂಗಿಗಳಲ್ಲಿ ಅಶ್ಲೀಲವಾಗಿ ಪೋಟೋ ತೆಗೆದುಕೊಂಡು ಶಿಕ್ಷಕರ ನಡುವಳಿಕೆಗಳಿಗೆ ವಿರುದ್ದವಾಗಿ ನಡೆದುಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಪುಪ್ಪಲತಾರನ್ನು ಸೇವೆಯಿಂದ ಅನುಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

Advertisement

ಶಿಕ್ಷಕ ಪುಪ್ಪಲತಾ, ಇತ್ತೀಚೆಗೆ ಶಾಲೆಯಿಂದ ಕೈಗೊಂಡಿದ್ದ ಶೈಕ್ಷಣಿಕ ಪ್ರವಾಸದ ವೇಳೆ ಶಾಲೆಯ ಅಪ್ರಾಪ್ತ ವಯಸ್ಸಿನ ಬಾಲಕನೊಂದಿಗೆ ತೆಂಗಿನ ತೋಟಗಳ ಮಧ್ಯೆ ಪರಸ್ಪರ ಕಿಸ್ ಕೊಡುವ ಪೋಟೋಗಳನ್ನು ತನ್ನ ಮೊಬೈಲ್ ಮೂಲಕ ಸೆರೆ ಹಿಡಿದುಕೊಂಡಿದ್ದರು. ಅವು ಶಿಕ್ಷಕಿಯ ಮೊಬೈಲ್‌ ನಿಂದ ಸೋರಿಕೆಯಾಗಿ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಶಿಸ್ತು ಕ್ರಮಕ್ಕೆ ಬಿಇ ಶಿಪಾರಸ್ಸು: ಶಿಕ್ಷಕಿ ವಿರುದ್ದ ಗಂಭೀರ ಆರೋಪ ಕೇಳಿ ಬಂದ ಬೆನ್ನಲೇ ಶಾಲೆಗೆ ಚಿಂತಾಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಶಾಲಾ ಸಹ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಹಾಗೂ ಅಡುಗೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದರು. ಆದರೆ ಅವರು ಯಾರು ಕೂಡ ಮುಖ್ಯ ಶಿಕ್ಷಕಿ ವಿದ್ಯಾರ್ಥಿ ಜೊತೆ ಪೋಟೋಗಳು ತೆಗೆಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಬಿಇಒ ಶಿಪಾರಸ್ಸಿನಂತೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲೆಯ ಉಪ ನಿರ್ದೇಶಕರಾದ ಪಿ.ಬೈಲಾಂಜನಪ್ಪ, ಇಲಾಖೆ ವಿಚಾರಣೆಗೆ ಕಾಯ್ದರಿಸಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next