Advertisement

ಚಿಕ್ಕಬಳ್ಳಾಪುರ : ಕೋವಿಡ್ ಸೋಂಕಿತರ ಯೋಗಕ್ಷೇಮ ವಿಚಾಸಿದ ನಗರಸಭಾಧ್ಯಕ್ಷರ

08:24 PM May 19, 2021 | Team Udayavani |

ಚಿಕ್ಕಬಳ್ಳಾಪುರ : ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಮೇ 20 ರಿಂದ ಸಂಪೂರ್ಣ ಲಾಕ್‍ಡೌನ್ ಘೋಷಿಸಿದೆ ಮತ್ತೊಂದಡೆ ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದ್‍ರೆಡ್ಡಿ(ಬಾಬು) ಅವರು ಪೌರಾಯುಕ್ತ ಡಿ.ಲೋಹಿತ್ ಮತ್ತು ತಹಶೀಲ್ದಾರ್ ಗಣಪತಿ ಶಾಸ್ತ್ರೀ ಅವರೊಂದಿಗೆ ನಗರದಲ್ಲಿ ಕೊರೊನಾ ಸೋಂಕಿತರ ಮನೆ ಬಾಗಿಲಿಗೆ ತೆರಳಿ ಅವರ ಆಹ್ವಾಲುಗಳನ್ನು ಆಲಿಸುವ ವಿನೂತನ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ.

Advertisement

ನಗರಸಭೆಯ ಅಧ್ಯಕ್ಷರಾದ ನಂತರ ಸತತ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿರುವ ನಗರಸಭೆಯ ಅಧ್ಯಕ್ಷರು ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಮಾರ್ಗದರ್ಶನದಲ್ಲಿ ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃಧ್ಧಿಗೊಳಿಸುವ ಜೊತೆಗೆ ನಗರದ ವಿವಿಧ ವಾರ್ಡ್‍ಗಳಲ್ಲಿ ಅಭಿವೃಧ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ ಇದೀಗ ನಗರಸಭೆಯ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಸ್ವಚ್ಛತಾ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ನಗರದ ವಿವಿಧಡೆ ಸ್ಯಾನಿಟೈಸ್ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಜಿಲ್ಲಾಡಳಿತದ ಸೂಚನೆ ಮೇರೆಗೆ ನಗರಸಭೆಯ ವ್ಯಾಪ್ತಿಯಲ್ಲಿ ಕೊರೊನಾ ಕಾರ್ಯಪಡೆಗಳನ್ನು ರಚಿಸಿ ಅದು ಸಕ್ರೀಯವಾಗಿ ಕಾರ್ಯನಿರ್ವಹಿಸಲು ವಿಶೇಷ ನಿಗಾವಹಿಸಿದ್ದಾರೆ ಕೊರೊನಾ ಸೋಂಕಿತರಿಗೆ ಸಮರ್ಪಕವಾಗಿ ಚಿಕಿತ್ಸೆ ಲಭಿಸಬೇಕೆಂಬ ಉದ್ದೋಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕು ದಂಡಾಧಿಕಾರಿಗಳೊಂದಿಗೆ ನಗರದ ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಮನೆ ಬಾಗಿಲಿಗೆ ತೆರಳಿ ಅವರ ಆಹ್ವಾಲುಗಳನ್ನು ಆಲಿಸಿ ಆರೋಗ್ಯ ಕಿಟ್ ಮತ್ತು ಸೂಕ್ತ ರೀತಿಯ ಚಿಕಿತ್ಸೆ ಲಭಿಸುತ್ತಿದ್ದಿಯೇ? ಎಂಬುದು ಪರಿಶೀಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ :ಭಾರತದಲ್ಲಿ ಕೋವಿಡ್19 ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಶೇ.13 ಇಳಿಕೆ : ಡಬ್ಲ್ಯು ಎಚ್‌ ಒ

ವಾರ್ಡ್‍ಗಳಿಗೆ ಭೇಟಿ: ನಗರಸಭೆಯ ವಾರ್ಡ್ ಸಂಖ್ಯೆ 22,23 ಹಾಗೂ 29 ಗಳಲ್ಲಿ ಸಂಚರಿಸಿ ಕೋವಿಡ್ ಸೋಂಕಿತರ ಆರೋಗ್ಯವನ್ನು ವಿಚಾರಿಸಿದರು ಇದೇ ಸಂದರ್ಭದಲ್ಲಿ ವಾರ್ಡ್‍ಗಳಲ್ಲಿ ಕೈಗೊಂಡಿರುವ ಸ್ವಚ್ಛತಾ ಕ್ರಮಗಳನ್ನು ಸಹ ಪರಿಶೀಲಿಸಿ ಸರ್ಕಾರದ ಆದೇಶದಂತೆ ಇಂದಿರಾ ಕ್ಯಾಂಟೀನ್‍ನಲ್ಲಿ ಬಡವರು-ಕೂಲಿ ಕಾರ್ಮಿಕರು ಸಹಿತ ನಾಗರಿಕರಿಗೆ ಗುಣಮಟ್ಟದ ಆಹಾರವನ್ನು ನೀಡುತ್ತಿದ್ದಾರೆ ಎಂಬುದು ಪರಿಶೀಲಿಸಿದರು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ ಬಡವರಿಗೆ ಉಪಹಾರವನ್ನು ಒದಗಿಸಬೇಕೆಂದು ಸೂಚಿಸಿದರು.

Advertisement

ಮನೆಯಲ್ಲಿ ತೊಂದರೆ ಇದ್ದರೇ ಸ್ಥಳಾಂತರ: ನಗರದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಸೋಂಕಿತರಿಗೆ ಸ್ಥಳಾವಕಾಶವಿದೆಯೇ? ಎಂಬುದನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ ನಗರಸಭಾಧ್ಯಕ್ಷರು ಮನೆಯಲ್ಲಿ ಶೌಚಾಲಯದ ವ್ಯವಸ್ಥೆಯಿದೀಯೇ? ಇರುವ ಸೌಲಭ್ಯಗಳನ್ನು ಪರಿಶೀಲಿಸಿ ಮನೆಯಲ್ಲಿ ಇರಲು ತೊಂದರೆ ಆಗುತ್ತಿದ್ದರೇ ಕೂಡಲೇ ಕೋವಿಡ್ ಸೆಂಟರ್‍ಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿ ಏನಾದರೂ ಸಮಸ್ಯೆ ಇದ್ದರೇ ನೇರವಾಗಿ ತಮ್ಮ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next