Advertisement

ಚಿಕ್ಕಬಳ್ಳಾಪುರ ನಗರಸಭೆಯ ಚುನಾವಣೆ: ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲು ನಿರ್ಧಾರ !

08:09 PM Oct 29, 2020 | Mithun PG |

ಚಿಕ್ಕಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿರುವ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಅಕ್ಟೋಬರ್-30 ರಂದು ನಡೆಯಲಿದ್ದು, ಅದಕ್ಕಾಗಿ ಕೈಗೊಂಡಿರುವ ಸಿದ್ದತೆಗಳನ್ನು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

Advertisement

ನಗರಸಭೆಯ ಕಾರ್ಯಾಲಯಕ್ಕೆ ಭೇಟಿ ನೀಡಿ ಚುನಾವಣೆಯ ವೇಳೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ರಘುನಂದನ್, ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ಪ್ರತಿಯೊಂದು ವಿಚಾರಗಳು ಮತ್ತು ವಿಷಯಗಳ ಕುರಿತು ನಿಗಾವಹಿಸಬೇಕೆಂದು ಸೂಚನೆ ನೀಡಿದರು.

ನಗರಸಭಾ ಸದಸ್ಯರು ಮತ್ತು ಚುನಾಯಿತ ಪ್ರತಿನಿಧಿಗಳು (ಸಂಸದರು-ಶಾಸಕರು) ಪ್ರವೇಶ ಕಲ್ಪಿಸಲಾಗಿದ್ದು, ಬೇರೆ ಯಾರಿಗೂ ಸಹ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಾಧ್ಯಮದವರಿಗೆ ಮಾಹಿತಿ ನೀಡಲು ನಿರ್ಧರಿಸಲಾಗಿದೆ. ಒಟ್ಟಾರೆ ಚುನಾವಣೆಯ ವೇಳೆಯಲ್ಲಿ ಯಾವುದೇ ರೀತಿಯ ಲೋಪದೋಷ ಆಗದಂತೆ ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದ್ದು, ನಗರಸಭೆಯ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಸೂಕ್ತ ಪೋಲಿಸ್ ಬಂದೋಬಸ್ತ್ ಸಹ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಉದಯವಾಣಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ,ನಗರಸಭೆಯ ಪೌರಾಯುಕ್ತ ಡಿ.ಲೋಹಿತ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಚಕ್ರಬಡ್ಡಿ ಮನ್ನಾಕ್ಕಾಗಿ ಗ್ರಾಹಕರು ಅರ್ಜಿ ಹಾಕಬೇಕಾಗಿಲ್ಲ! ವಿತ್ತ ಸಚಿವಾಲಯ ಸ್ಪಷ್ಟನೆ

Advertisement

ನಿಷೇದಾಜ್ಞೆ ಜಾರಿ: ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಸಂಬಂಧ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು, ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗದಂತೆ ಚುನಾವಣೆ ನಡೆಯುವ ನಿಟ್ಟಿನಲ್ಲಿ, ಅಕ್ಟೋಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿಕ್ಕಬಳ್ಳಾಪುರ ನಗರಸಭೆಯ 2 ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ಭಾರತೀಯ ದಂಡ ಸಂಹಿತೆ ಪ್ರಕ್ರಿಯೆ ಕಲಂ 144ನ್ನು ಜಾರಿಗೊಳಿಸಿ ಚಿಕ್ಕಬಳ್ಳಾಪುರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಚುನಾವಣೆ: ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ದಿನಾಂಕ 30.10.2020 ರಂದು ನಡೆಯಲಿದ್ದು ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ “ಎ” ವರ್ಗಕ್ಕೆ ಮೀಸಲಾಗಿದ್ದು ಅಪರಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ನಾಮಪತ್ರವನ್ನು ಸ್ವೀಕರಿಸಿ,ಅಪರಾಹ್ನ 3 ಗಂಟೆಯಿಂದ 3:15 ವರೆಗೆ ನಾಮಪತ್ರಗಳ ಪರಿಶೀಲಿಸಿ ಅಪರಾಹ್ನ 3:15 ಗಂಟೆಯಿಂದ 3:30 ವರೆಗೆ ನಾಮಪತ್ರಗಳನ್ನು ವಾಪಸ್ಸು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಅಪರಾಹ್ನ 3:30 ಬಳಿಕ ಚುನಾವಣೆ ಪ್ರಕ್ರಿಯೆ ಮುಂದುವರೆಯಲಿದೆ  ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ರಘುನಂದನ್ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರ ಭೂಮಿ ಖರೀದಿ ಕಾನೂನು: ಪಿಡಿಪಿ ಪ್ರತಿಭಟನೆ, ಹಲವರ ಬಂಧನ

 

Advertisement

Udayavani is now on Telegram. Click here to join our channel and stay updated with the latest news.

Next