Advertisement

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

07:18 PM Jul 10, 2021 | Team Udayavani |

ಚಿಕ್ಕಬಳ್ಳಾಪುರ: ಗ್ರಾಮೀಣ ಭಾಗದಲ್ಲಿ ಅಕ್ರಮಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ದೂರುಕೇಳಿ ಬರುತ್ತಿದ್ದು, ಈ ಬಗ್ಗೆ ಅಬಕಾರಿ ಹಾಗೂಪೊಲೀಸ್‌ ಅಧಿಕಾರಿಗಳು ಜಂಟಿ ಆಗಿ ದಾಳಿಮಾಡಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಅಕ್ರಮಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು.

Advertisement

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತುಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿ, ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುವುದರಿಂದ ಯುವಕರುಮದ್ಯದ ಅಮಲಿಗೆ ಒಳಗಾಗುತ್ತಾರೆ. ಅವರವಿರುದ್ಧ ಪೊಲೀಸ್‌ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿ ಸುತ್ತಿದ್ದಾರೆ.  ಆದರೆ, ಅಬಕಾರಿಇಲಾಖೆಯವರು ನಿರೀಕ್ಷಿತ ಮಟ್ಟದಲ್ಲಿ ಕ್ರಮಕೈಗೊಳ್ಳುತ್ತಿಲ್ಲ ಎಂದು ಸಮಿತಿ ಸದಸ್ಯರು ಸಭೆಯಲ್ಲಿದೂರಿದರು.

ಸ್ಮಶಾನಕ್ಕೆ ದಾರಿ ವ್ಯವಸ್ಥೆ: ಗೌರಿಬಿದನೂರುತಾಲೂಕು ಮಂಚೇನಹಳ್ಳಿ ಗ್ರಾಮದ ಬಾಬೂಜಗಜೀವನ್‌ ರಾಂ ಕಾಲೋನಿಗೆ ಮಂಜೂರಾಗಿರುವ ಸ್ಮಶಾನಕ್ಕೆ ದಾರಿ ಇಲ್ಲದೆ ಕೆರೆ ಅಂಗಳದಲ್ಲಿಶವಸಂಸ್ಕಾರ ಮಾಡುತ್ತಿರುವುದಾಗಿ ಸದಸ್ಯ ಜಿ.ವೆಂಕಟರಮಣಪ್ಪ ದೂರಿದರು. ಇದಕ್ಕೆಪ್ರತಿಕ್ರಿಯಿಸಿದ ಗೌರಿಬಿದನೂರು ತಹಶೀಲ್ದಾರ್‌ಶ್ರೀನಿವಾಸ್‌, ಈ ಬಗ್ಗೆ ಸ್ಥಳ ಪರಿಶೀಲನೆ ಮಾಡಿ,ಆದಷ್ಟು ಬೇಗ ಸ್ಮಶಾನಕ್ಕೆ ದಾರಿ ವ್ಯವಸ್ಥೆಮಾಡಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next