ಚಿಂತಾಮಣಿ : ಮಿಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಗುಟ್ಟಹಳ್ಳಿ ಯಲ್ಲಿ ಸ್ವತ್ಛತೆ ಮರೀಚಿಕೆಯಾಗಿದೆ. ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೇ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ರಸ್ತೆ ಮೇಲೆ ಕೊಳಚೆ ನೀರು ಹರಿಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.
ಸುಮಾರು ತಿಂಗಳುಗಳಿಂದ ರಸ್ತೆ ಬದಿಯ ಚರಂಡಿಯಲ್ಲಿ ತ್ಯಾಜ್ಯ ಹಾಗೂ ಮಣ್ಣು ತುಂಬಿಕೊಂಡಿದ್ದು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ. ಚರಂಡಿಯಲ್ಲಿ ನೀರು ನಿಂತಲ್ಲೇ ನಿಂತಿರುವುದರಿಂದ ಕಸವು ಸೇರಿ ಕೊಳೆಯುತ್ತಿದ್ದು, ದುರ್ವಾಸನೆ ಬೀರುತ್ತಿದೆ. ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ. ಸುತ್ತಮುತ್ತಲಿನ ಮನೆಗಳ ವೃದ್ಧರು ಹಾಗೂ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುವಂತಿದೆ.
ಇದನ್ನೂ ಓದಿ : ಸಂಪುಟ ಕುರಿತು ಸಿಎಂ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕು: ಮುರುಗೇಶ್ ನಿರಾಣಿ
ಇದಕ್ಕೆ ಪಂಚಾಯಿತ್ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಗ್ರಾಮದವರು ದೂರಿದ್ದಾರೆ. ಸ್ವತ್ಛತೆಗೆ ಮುಂದಾಗುವಂತೆ ಒತ್ತಾಯಿಸಿದ್ದಾರೆ. ಗ್ರಾಮ ಪಂಚಾಯಿತಿಯಿಂದ ಸ್ವತ್ಛತೆ ಮಾಡುತ್ತಿಲ್ಲ ತೆರೆದ ಚರಂಡಿಗಳು ದುರ್ವಾಸನೆ ಬೀರುತ್ತಿದ್ದು, ನಿವಾಸಿಗಳು ತೊಂದರೆಪಡುವಂತಾಗಿದೆ. ವರ್ಷಗಳೇ ಕಳೆದರೂ ಸ್ವತ್ಛಗೊಳ್ಳದ ಚರಂಡಿಗಳಿಂದ ರೋಗ ಭೀತಿ ಎದುರಾಗಿದೆ. ಇದರಿಂದಾಗಿ ನಿವಾಸಿಗಳು ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ.
ಇದನ್ನೂ ಓದಿ : ಜಿಯೋ ನೀಡುತ್ತಿದೆ ಗ್ರಾಹಕ ಸ್ನೇಹಿ ಪ್ರೀಪೇಯ್ಡ್ ಪ್ಲ್ಯಾನ್ಸ್..! ಇಲ್ಲಿದೆ ಸಂಪೂರ್ಣ ಮಾಹಿತಿ