Advertisement

ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ

09:43 PM Mar 07, 2021 | Team Udayavani |

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಬೇಸಿಗೆಯ ಸೆಕೆ ಆರಂಭವಾಗುವ ಮುನ್ನವೇ ಆಕಸ್ಮಿಕವಾಗಿ ಬೆಂಕಿ ಅವಘಡಗಳು ಸಂಭವಿಸುತ್ತಿವೆ ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗೇಟ್ ಸಮೀಪ ನೀಲಗಿರಿ ತೋಪಿನಲ್ಲಿ ಆಕಸ್ಮಿಕವಾಗಿ ಬಿದ್ದ ಪರಿಣಾಮ ನಷ್ಟ ಸಂಭವಿಸಿದೆ.

Advertisement

ಶಿಡ್ಲಘಟ್ಟದಿಂದ ಹೊಸಕೋಟೆ ಮಾರ್ಗದಲ್ಲಿರುವ ಬೆಳ್ಳೂಟಿ ಗೇಟ್ ಬಳಿ ಇರುವ ನೀಲಗಿರಿ ತೋಪಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ತಕ್ಷಣ ಗ್ರಾಮಸ್ಥರು ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಅಗ್ನಿಶಾಮಕದಳದ ಸಿಬ್ಬಂದಿ ಒಂದಡೆ ಬೆಂಕಿಯನ್ನು ನಂದಿಸುತ್ತಿದ್ದರೆ ಮತ್ತೊಂದಡೆ ಬೆಂಕಿ ಹೆಚ್ಚಾಗಿದ್ದರಿಂದ ಅದನ್ನು ಆರಿಸಲು ಹರಸಾಹಸ ಮಾಡುವಂತಹ ಪರಿಸ್ಥಿತಿ ನಿರ್ಮಾಣಗೊಂಡಿತ್ತು.

ಇದನ್ನೂ ಓದಿ :ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!   

ಶಿಡ್ಲಘಟ್ಟ ತಾಲೂಕಿನಲ್ಲಿರುವ ಅಗ್ನಿಶಾಮಕದಳ ಘಟಕದಲ್ಲಿ ನೀರಿಲ್ಲದೆ ಸಕಾಲದಲ್ಲಿ ಬೆಂಕಿಯನ್ನು ಆರಿಸಲು ಸಮಸ್ಯೆಯಾಗಿದೆಯೆಂದು ದೂರುಗಳು ಕೇಳಿಬಂದಿದ್ದು ಸರ್ಕಾರ ಕೂಡಲೇ ಅಗ್ನಿಶಾಮಕದಳ ಘಟಕದಲ್ಲಿ ಕೊಳವೆಬಾವಿಯನ್ನು ಕೊರೆಸಿ ನೀರಿನ ವ್ಯವಸ್ಥೆ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next