Advertisement

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ಕೆ.ನಾಗೇಂದ್ರ ಪ್ರಸಾದ್ ನೇಮಕ

09:35 PM Feb 13, 2021 | Team Udayavani |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದ ಪಿ. ಶಿವಶಂಕರ್ ಅವರು ವರ್ಗಾವಣೆಯಾಗಿದ್ದು ಅವರ ಜಾಗದಲ್ಲಿ ಕೆ.ನಾಗೇಂದ್ರಪ್ರಸಾದ್ ಅವರನ್ನು ನೂತನ ಸಿಇಓ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರ ಆಪ್ತ ಕಾರ್ಯದರ್ಶಿ ಆಗಿ ಸೇವೆ ಸಲ್ಲಿಸುತ್ತಿದ್ದ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸ್ಥಾನ ಭಾಗ್ಯ ಲಭಿಸಿದೆ ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯಲ್ಲಿ ಸಿಇಓ ಆಗಿ ಸೇವೆ ಸಲ್ಲಿಸುತ್ತಿದ್ದ ಪಿ. ಶಿವಶಂಕರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ಜಿಪಂ ಸಿಇಓ ಆಗಿ ಸೇವೆ ಸಲ್ಲಿಸುತ್ತಿದ್ದ ಬಿ.ಫೌಝೀಯಾ ತರುನ್ನುಮ್ ಅವರನ್ನು ವರ್ಗಾವಣೆ ಮಾಡಿದ ಬಳಿಕ ಪಿ.ಶಿವಶಂಕರ್ ಅವರನ್ನು ನೂತನ ಸಿಇಓ ಆಗಿ ಸರ್ಕಾರ ನೇಮಕ ಮಾಡಿತ್ತು ಇನ್ನೂ ಐದು ತಿಂಗಳು ಪೂರ್ಣಗೊಳ್ಳುವ ಮುನ್ನವೇ ಸಿಇಓ ಪಿ.ಶಿವಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next