ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಾಡಲು ಹೋದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಜ್ವಾರಪಲ್ಲಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕೆರೆಯಲ್ಲಿ ಆಂದ್ರಪ್ರದೇಶ ಮೂಲದ ಬದ್ರಿನಾಥ್ ಹಾಗೂ ವರೂಣ್ ಎಂಬಾತನ ಮೃತ ದೇಹಗಳು ಪತ್ತೆಯಾಗಿದ್ದು ಸಂತೋಷ್ ಮತ್ತು ಮಹೇಶ್ ಎಂಬುವವರು ನಾಪತ್ತೆಯಾಗಿದ್ದಾರೆ, ಅವರನ್ನು ಪತ್ತೆ ಮಾಡುವ ಕಾರ್ಯದಲ್ಲಿ ಅಗ್ನಿ ಶಾಮಕದಳ ಸಿಬ್ಬಂದಿ ಮತ್ತು ಪೋಲೀಸ್ ಇಲಾಖೆಯ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ.
ನಾಲ್ವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಾಡಲು ತೆರಳಿದ್ದು ಬಹುಶಃ ಈಜು ಬಾರದೆ ಅಥವಾ ಕೆರೆ ಆಳವಾಗಿರುವ ಹಿನ್ನೆಲೆಯಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿದೆ ಈಗಾಗಲೇ ಇಬ್ಬರು ವಿದ್ಯಾರ್ಥಿಗಳ ಮೃತ ದೇಹಗಳು ಪತ್ತೆ ಆಗಿದ್ದು ಇನ್ನು ನಾಪತ್ತೆ ಆಗಿರುವ ವಿದ್ಯಾರ್ಥಿಗಳನ್ನು ಪತ್ತೆಹಚ್ಚಲು ಜಂಟಿ ಕಾರ್ಯಾಚರಣೆ ನಡೆಯುತ್ತಿದೆ.
ವಿದ್ಯಾರ್ಥಿಗಳು ಮುಳುಗಿರುವ ವಿಚಾರ ತಿಳಿದ ತಕ್ಷಣ ಗ್ರಾಮಸ್ಥರು ಅವರನ್ನು ರಕ್ಷಣೆ ಮಾಡಲು ಪ್ರಯತ್ನ ಮಾಡಿದರೂ ಸಹ ಪ್ರಯೋಜನವಾಗಿಲ್ಲ ಪ್ರಸ್ತುತ ಇಬ್ಬರು ವಿದ್ಯಾರ್ಥಿಗಳ ಮೃತ ದೇಹಗಳ ಪತ್ತೆ ಮಾಡುವುದರಲ್ಲಿ ಪೋಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಅಡುಗೆ ಮಾತ್ರವಲ್ಲ…ಕಬ್ಬಿಣಾಂಶ ಹೊಂದಿರುವ ಜೀರಿಗೆ ಹಲವು ಔಷಧೀಯ ಗುಣ ಹೊಂದಿದೆ!
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ಸಲುವಾಗಿ ಶಾಲೆಗಳನ್ನು ಮುಚ್ಚಲಾಗಿದ್ದು ವಿದ್ಯಾರ್ಥಿಗಳು ಈಜಾಡಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟಿರುವ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.