Advertisement

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

12:13 PM Sep 05, 2024 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲೆಯ‌ ಚಿಂತಾಮಣಿ ನಗರದಲ್ಲಿ ಬೆಳಗ್ಗೆ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಹೋಟೆಲ್ ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

Advertisement

ಮೃತರನ್ನು ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ನಿವಾಸಿ ಶಿವಾನಂದ, ಕೋಲಾರ ಜಿಲ್ಲೆಯ ವೆಲಗಲಬುರೆ ಗ್ರಾಮದ ನಿವಾಸಿ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಮೃತರಿಬ್ಬರು ಹೋಟೆಲ್ ಕಾರ್ಮಿಕರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಗೊಂಡಿರುವ ಮುರಳಿ ಹಾಗೂ ಶ್ರೀನಿವಾಸ ಬಾಬು ಅವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆ ಗೆ ಚಿಕಿತ್ಸೆಗೆ ಸೇರಿಸಲಾಗಿದೆ. ಟಿಪ್ಪರ್ ಚಾಲಕ ಅಪಘಾತ ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next