Advertisement
ಮೊದಲಿಗೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯ ದಂಡಿಗಾನಹಳ್ಳಿ ಕೆರೆಗೆ ಭೇಟಿ ನೀಡಿ ಅಲ್ಲಿನ ಪ್ರಾಕೃತಿಕ ಸೌಂದರ್ಯವನ್ನು ಕಂಡು ಸಂತಸಗೊಂಡರು ಬೆಟ್ಟಗುಡ್ಡಗಳ ಮಧ್ಯೆ ಕೆರೆ ಮತ್ತು ಸುತ್ತಮುತ್ತಲು ಸಮೃಧ್ಧವಾಗಿ ಬೆಳೆದಿರುವ ಮರಗಿಡಗಳನ್ನು ನೋಡಿ ಇದನ್ನು ಪ್ರವಾಸಿ ತಾಣವನ್ನು ಅಭಿವೃಧ್ಧಿಗೊಳಿಸಲು ಇಂಗಿತ ವ್ಯಕ್ತಪಡಿಸಿದರು.
Related Articles
Advertisement
ನಿರ್ದೇಶಕರ ಆಸಕ್ತಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಪ್ರಮುಖ ಸ್ಥಳಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃಧ್ಧಿಗೊಳಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ಎನ್.ರಮೇಶ್ ಅವರು ವಿಶೇಷ ಆಸಕ್ತಿ ತೋರಿಸಿದರು. ಯಾವ ಯಾವ ಪ್ರದೇಶಗಳನ್ನು ಪ್ರವಾಸಿ ಕೇಂದ್ರಗಳಾಗಿ ಅಭಿವೃಧ್ಧಿಗೊಳಿಸಲು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿ ದಂಡಿಗಾನಹಳ್ಳಿ ಕೆರೆ ವೀಕ್ಷಣೆ ವೇಳೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಳೆನಾಡು ಎಂದು ಖ್ಯಾತಿ ಹೊಂದಿರುವ ಈ ಪ್ರದೇಶವನ್ನು ಪ್ರವಾಸಿಗರ ತಾಣವಾಗಿ ಅಭಿವೃಧ್ಧಿಗೊಳಿಸಿ ಕೆರೆಯಲ್ಲಿ ಭದ್ರತಾ ಕ್ರಮಗಳನ್ನು ಕೈಗೊಂಡು ಬೋಟಿಂಗ್ ವ್ಯವಸ್ಥೆ ಕಲ್ಪಿಸಬೇಕೆಂದು ನಾಗರಿಕರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಎಸ್ಪಿ ಮಿಥುನ್‍ಕುಮಾರ್, ಜಿಲ್ಲಾ ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಚಿಕ್ಕಬಳ್ಳಾಪುರ ನಗರಸಭೆಯ ಪೌರಾಯುಕ್ತ ಡಿ. ಲೋಹಿತ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನರೇಶ್,ಪ್ರವಾಸೋದ್ಯಮ ಇಲಾಖೆಯ ವಿಶೇಷ ಅಧಿಕಾರಿ ಗೋಪಾಲ್,ಚಿಕ್ಕಬಳ್ಳಾಪುರ ತಹಶೀಲ್ದಾರ್ ನಾಗಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.