Advertisement
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 254 ಮತಗಟ್ಟೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಎದುರಿಸುತ್ತಿರುವ ಸಮಸ್ಯೆಗಳನ್ನು ಉಭಯ ನಾಯಕರಿಗೆ ಮನವರಿಕೆ ಮಾಡಿಕೊಟ್ಟು 2023ರ ವಿಧಾನಸಭೆಯ ಚುನಾವಣೆಗೆ ಸಮಾಜದಲ್ಲಿರುವ ಎಲ್ಲಾ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತಿರುವ ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.
Related Articles
Advertisement
ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ನಗರಸಭೆಯ ಚುನಾವಣೆ, ಗ್ರಾಪಂಗಳ ಚುನಾವಣೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದಾರೆ ಇವರೊಂದಿಗೆ ಕ್ಷೇತ್ರದಲ್ಲಿ ಅನೇಕ ನಾಯಕರು ಸಹ ಅವರಿಗೆ ಸಾಥ್ ನೀಡಿದ್ದಾರೆ ಕ್ಷೇತ್ರದಲ್ಲಿ ಆರೋಗ್ಯ ಸಚಿವರ ಸರ್ವಾಧಿಕಾರ ಧೋರಣೆ ಮತ್ತು ಆಡಳಿತ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗಾಗಿ ಕಾಂಗ್ರೆಸ ಪಕ್ಷದಿಂದ ಇವರಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿ ನಾವೆಲ್ಲರು ಸೇರಿ ವಿನಯ್ ಎನ್ ಶ್ಯಾಮ್ ಅವರನ್ನು ಗೆಲ್ಲಿಸುತ್ತೇವೆ ಎಂದು ಘೋಷಣೆ ಮಾಡಿದರು.
ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಅಹವಾಲುಗಳನ್ನು ಆಲಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡುವ ಕಾರ್ಯದಲ್ಲಿ ಎಲ್ಲರೂ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂದು ಸೂಚನೆ ನೀಡಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದರು.