Advertisement

ನರೇಗಾ ಅನುಷ್ಠಾನ : ಚಿಕ್ಕಬಳ್ಳಾಪುರ ಜಿಲ್ಲಾ ಪಂ. ಉಪ ಕಾರ್ಯದರ್ಶಿಗೆ ರಾಜ್ಯ ಮಟ್ಟದ ಪ್ರಶಸ್ತಿ

08:49 PM Mar 09, 2022 | Team Udayavani |

ಚಿಕ್ಕಬಳ್ಳಾಪುರ : 2021-22 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಶಿವಕುಮಾರ್ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಶಿವಕುಮಾರ್ ಅವರು ಈ ಹಿಂದಿನ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫೌಝೀಯಾ ತರುನ್ನುಮ್ ಅವರ ಮಾರ್ಗದರ್ಶನದಲ್ಲಿ ನರೇಗಾ ಕಾಮಗಾರಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಆರೋಗ್ಯ, ಶಿಕ್ಷಣ ಮತ್ತು ಜಲ ಸಂರಕ್ಷಣೆ ಮಾಡುವ ಯೋಜನೆಗಳನ್ನು ಕೈಗೆತ್ತಿಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗಮನಸೆಳೆದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಮುಂಬಡ್ತಿ ಪಡೆದ ಬಿ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ಬಳಿಕ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಕಾರ್ಯದರ್ಶಿಯಾಗಿ ಸಲ್ಲಿಸುತ್ತಿದ್ದಾರೆ ಗ್ರಾಮೀಣಾಭಿವೃಧ್ಧಿ ಮತ್ತು ಗ್ರಾಮ ನೈರ್ಮಲ್ಯ ಕಾಮಗಾರಿಗಳಿಗೆ ವಿಶೇಷ ಆದ್ಯತೆ ನೀಡುತ್ತಿರುವ ಅವರು ಪ್ರಸ್ತುತ ಜಿಲ್ಲಾ ಪಂಚಾಯತ್ ಸಿಇಓ ಪಿ. ಶಿವಶಂಕರ್ ಅವರ ಮಾರ್ಗದರ್ಶನದಲ್ಲಿ ಮತ್ತೊಮ್ಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನರೇಗಾ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಮಾದರಿ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಿದರು ಜಿಲ್ಲೆಯಲ್ಲಿ ಮಳೆನೀರು ಸಂರಕ್ಷಣೆಗಾಗಿ ಕೆರೆ,ಕುಂಟೆ,ಕಾಲುವೆ, ಕಲ್ಯಾಣಿಗಳು ಪುನಶ್ಚೇತನಗೊಳಿಸಿದ್ದರಲ್ಲದೆ ಬಹುಕಮಾನ್ ಚೆಕ್‌ಡ್ಯಾಮ್‌ಗಳನ್ನು ನಿರ್ಮಿಸಿ ಮಳೆ ನೀರು ಇಂಗುವಂತೆ ಯಶಸ್ವಿಯಾಗಿದ್ದಾರೆ ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸಹ ಮೂಲಭೂತ ಸೌಲಭ್ಯಗಳನ್ನು ಮೇಲ್ದಜೇಗೇರಿಸಲು ಕ್ರಮ ಕೈಗೊಂಡಿದ್ದು ಶಾಲೆಗಳಿಗೆ ಆಟದ ಮೈದಾನ, ವಿದ್ಯಾರ್ಥಿಗಳ ಭದ್ರತೆಗಾಗಿ ಕಾಂಪೌಂಡ್ ನಿರ್ಮಾಣ,ಮಳೆ ನೀರು ಕೊಯ್ಲು ಪದ್ದತಿಯ ಅನುಷ್ಠಾನ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಮೀಪ ಮಾದರಿ ಉದ್ಯಾನವನಗಳ ನಿರ್ಮಾಣ, ಗ್ರಾಮ ನೈರ್ಮಲ್ಯ ಕಾಪಾಡಲು ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಿ ಅನುಷ್ಠಾನಗೊಳಿಸಿದ್ದಾರೆ.

ಇದನ್ನೂ ಓದಿ : ಸ್ಮಶಾನ ಹೋರಾಟದ ದಿನದಿಂದ ನಾಪತ್ತೆಯಾಗಿದ್ದ ಸದಸ್ಯನಿಂದ ಇಲ್ಲಸಲ್ಲದ ಆರೋಪ : ಖಂಡನೆ

Advertisement

ಜಿಲ್ಲೆಯಲ್ಲಿ ನರೇಗಾ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ ಕಾರಣಕ್ಕಾಗಿ ಅವರ ಕಾರ್ಯವೈಖರಿ ಮತ್ತು ಸೇವೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ನೀಡುತ್ತಿರುವ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ ಇದೇ ತಿಂಗಳು ೧೪ ರಂದು ಬೆಂಗಳೂರಿನ ಬ್ಯಾಂಕ್ವಿಟ್ ಹಾಲ್‌ನಲ್ಲಿ ನಡೆಯುವ ರಾಜ್ಯಮಟ್ಟದ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇವರೊಂದಿಗೆ ನರೇಗಾ ಯೋಜನೆಯನ್ನು ಅನುಷ್ಠಾನಗೊಳಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಸಂತೆಕಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಪ್ರತಿಭಾ ಅವರನ್ನು ಸಹ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next