Advertisement

ಚಿಕ್ಕಬಳ್ಳಾಪುರ ನಗರದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ: ಡಿಎಸ್ ಆನಂದ್‍ರೆಡ್ಡಿ

06:40 PM Dec 05, 2020 | sudhir |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ  5 ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ ಸುಧಾಕರ್ ಅವರು 80 ಲಕ್ಷ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ನಗರಸಭೆಯ ಅಧ್ಯಕ್ಷ ಡಿಎಸ್ ಆನಂದ್‍ರೆಡ್ಡಿ (ಬಾಬು) ತಿಳಿಸಿದರು.

Advertisement

ನಗರದ ಬಜಾರ್ ರಸ್ತೆ ಮತ್ತಿತರರ ಕಡೆ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಚಿಕ್ಕಬಳ್ಳಾಪುರ ನಗರವನ್ನು ರಾಜ್ಯದಲ್ಲಿ ಮಾದರಿಯಾಗಿ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ನಗರದ ಬಿಬಿ ರಸ್ತೆ ಮತ್ತು ಎಂಜಿ ರಸ್ತೆ ಸಹಿತ 5 ಪ್ರದೇಶಗಳಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಜಿಲ್ಲಾ ಉಸ್ತುವಾರಿ ಸಚಿವರು 80 ಲಕ್ಷ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದು ಅತೀ ಶೀಘ್ರದಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಕಾರ್ಯ ಆರಂಭಿಸಲಾಗುವುದು ಎಂದರು.

ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡಲು ಪ್ರಥಮ ಆದ್ಯತೆ ನೀಡಲಾಗಿದೆ ನಗರದ ವಿವಿಧ ಬೀದಿ ಬಡಾವಣೆಗಳಲ್ಲಿ ಕಸಕಡ್ಡಿ ಮತ್ತು ತ್ಯಾಜ್ಯವನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ನಾಗರಿಕರು ಸಹ ಮನೆಯಲ್ಲಿ ಒಣ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ನಗರವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ:ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದೆಯಾ? ವಹಿವಾಟಿಲ್ಲದ ಖಾತೆಗಳನ್ನು ಸ್ಥಗಿತಗೊಳಿಸೋದು ಹೇಗೆ

ನಗರ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲು ನಾಗರಿಕರಿಂದ ಬೇಡಿಕೆ ಕೇಳಿ ಬಂದಿದ್ದು ಜಿಲ್ಲಾ ಉಸ್ತುವಾರಿ ಸಚಿವರು ನಾಗರಿಕರ ಸಮಸ್ಯೆಗೆ ಸ್ಪಂದಿಸಿ 80 ಲಕ್ಷ ರೂ.ಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದು, ಅದಕ್ಕಾಗಿ ನಾಗರಿಕರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ನಗರಸಭಾ ಅಧ್ಯಕ್ಷರು ಇಟಲಿ ದೇಶದಲ್ಲಿ ನಿರ್ಮಿಸಿರುವ ಶೌಚಾಲಯಗಳ ಮಾದರಿಯಲ್ಲಿ ನಗರದಲ್ಲಿ ಸಹ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಸಹಕಾರ ಪಡೆಯಲಾಗಿದೆ ಎಂದರು.

Advertisement

ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತ ಡಿ. ಲೋಹಿತ್, ಮುಖಂಡರಾದ ಮಹಾಕಾಳಿ ಬಾಬು ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next