Advertisement

Chikkamagalur: ವಕೀಲರು-ಪೊಲೀಸರ ನಡುವೆ‌ ಗಲಾಟೆ- CID ತನಿಖೆಗೆ ಸಮ್ಮತಿಸಿದ ಹೈಕೋರ್ಟ್‌

11:51 PM Dec 05, 2023 | Team Udayavani |

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸಿಐಡಿಗೆ ವಹಿಸಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಸಮ್ಮತಿ ಸೂಚಿರುವ ಹೈಕೋರ್ಟ್‌, ಡಿಐಜಿ ದರ್ಜೆಯ ಉನ್ನತ ಅಧಿಕಾರಿಯಿಂದ ತನಿಖೆ ನಡೆಸಬೇಕು ಮತ್ತು ಇಡೀ ತನಿಖೆಯ ಮೇಲೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು (ಡಿಐಜಿ) ನಿಗಾ ಇಡಬೇಕು ಎಂದು ನಿರ್ದೇಶನ ನೀಡಿದೆ.

Advertisement

ಈ ವಿಚಾರವಾಗಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಈ ವೇಳೆ ಸರಕಾರದ ಪರ ಹಾಜರಾದ ಅಡ್ವೋಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಪ್ರಕರಣದಲ್ಲಿ ಸರಕಾರ ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ 5 ಎಫ್ಐಆರ್‌ಗಳ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಆದೇಶದ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ವಿಚಾರಣೆ 12ಕ್ಕೆ ಮುಂದೂಡಿಕೆ
ಪೊಲೀಸರು ಹಾಗೂ ವಕೀಲರ ನಡುವಿನ ಸಂಘರ್ಷ ಸಂಬಂಧ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಸುಮೊಟೊ ಪ್ರಕರಣದ ವಿಚಾರಣೆಯನ್ನು ಡಿ. 12ಕ್ಕೆ ಮುಂದೂಡಿ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ನಗರದಲ್ಲಿ ವಕೀಲರು ಹಾಗೂ ಪೊಲೀಸರ ನಡುವಿನ ಸಂಘರ್ಷ ಸಂಬಂಧ ದೂರು-ಪ್ರತಿ ದೂರು ದಾಖಲಾಗಿದ್ದು, ಈ ಪ್ರಕರಣ ಸಂಬಂಧ ಹೈಕೋರ್ಟ್‌ ನ್ಯಾಯಾ ಧೀಶರು ಸ್ವಯಂ ದೂರು ದಾಖಲಿಸಿಕೊಂಡು ಪ್ರಕರಣದ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಪಡಿಸಿದ್ದರು. ಮಂಗಳವಾರ ಪ್ರಕರಣ ಸಂಬಂಧ ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರಿಂದ ವರದಿ ಪಡೆದಿರುವ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಡಿ. 12ಕ್ಕೆ ಮುಂದೂಡಿದೆ. ಅಡ್ವೋಕೇಟ್‌ ಜನರಲ್‌ ನೇತೃತ್ವದಲ್ಲಿ ಡಿ. 9ಕ್ಕೆ ಪ್ರಮುಖರ ಸಭೆ ನಡೆಸಲು ನ್ಯಾಯಪೀಠ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next