ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ದೋಷಿ ಎಂದು ಚಿಕ್ಕಮಗಳೂರು ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿ, ತಪ್ಪಿತಸ್ಥರಿಗೆ ಶಿಕ್ಷೆ ಪ್ರಮಾಣವನ್ನು ಮಾ.11 ಕಾಯ್ದಿರಿಸಿ ಆದೇಶಿದೆ.
ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ತಾಯಿಯೇ ದೋಷಿ ಎಂದು ಚಿಕ್ಕಮಗಳೂರು ತ್ವರಿತಗತಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಪ್ರಕರಣದಲ್ಲಿ 52 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. 48 ಜನ ಆರೋಪಿಗಳನ್ನು ಖುಲಾಸೆಗೊಳಿಸಿ ನಾಲ್ವರು ತಪ್ಪಿತಸ್ಥರೆಂದು ಆದೇಶಿಸಲಾಗಿದೆ.
ಪ್ರಕರಣದ ಸಂತ್ರಸ್ತ ಬಾಲಕಿ ತಾಯಿ ಒಳಗೊಂಡಂತೆ ಮೂವರು ತಪ್ಪಿತಸ್ಥರೆಂದು ನ್ಯಾಯಲಯ ಆದೇಶಿಸಿದ್ದು, ಕಳೆದ ಮೂರು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಲಾಗಿತ್ತು.
ಶೃಂಗೇರಿ ತಾಲೂಕಿನ ಗೋಚವಳ್ಳಿ ಸಮೀಪದ ಮನೆಯಲ್ಲಿ ಘಟನೆ ನಡೆದಿದ್ದು, ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯ ನಿರ್ವಹಿಸಿದ್ದ ಶೃತಿ ಪ್ರಕರಣ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.