ಚಿಕ್ಕಮಗಳೂರು: ಸರ್ಕಾರ ನಿಗ ದಿಪಡಿಸಿರುವಂತೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಹಾಸಿಗೆ ಮೀಸಲಿಡಲಾಗಿದೆಯೇ, ಸರ್ಕಾರಿ ಆಸ್ಪತ್ರೆ ಶಿಫಾರಸ್ಸಿನ ಮೇಲೆ ಕಳಿಸಿದ ಸೋಂಕಿತನಿಗೆ ಹಾಸಿಗೆ ನೀಡಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸ್ಪಂ ದಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಜಿಲ್ಲಾ ಧಿಕಾರಿಗೆ ಸೂಚಿಸಿದರು.
ಮಂಗಳವಾರ ನಗರದ ಜಿಪಂ ಸಭಾಂಗಣದಲ್ಲಿ ಕೊರೊನಾ ಸೋಂಕು ನಿಯಂತ್ರಣ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ ಸೋಂಕಿತನಿಗೆ ಹಾಸಿಗೆ ವ್ಯವಸ್ಥೆ ಮಾಡಿದ್ದಾರೋ ಅಥವಾ ಅವರು ದಾಖಲಿಸಿಕೊಂಡ ಸೋಂಕಿತನಿಗೆ ನೀಡಿದ್ದಾರೋ ಎಂಬ ಮಾಹಿತಿ ಸಂಗ್ರಹಿಸಬೇಕು. ಪ್ರತೀದಿನದ ಹೆಲ್ತ್ ಬುಲೆಟಿನ್ ಮಾಹಿತಿ ಪ್ರತಿಯೊಬ್ಬ ಶಾಸಕರಿಗೂ ತಿಳಿಸಬೇಕು.
ಅಧಿಕಾರಿಗಳು ಮತ್ತು ಜನಪ್ರತಿನಿ ಧಿಗಳು ಒಟ್ಟಾಗಿ ಕೆಲಸ ನಿರ್ವಹಿಸಿದಾಗ ಸೋಂಕು ನಿಯಂತ್ರಣಕ್ಕೆ ತರಲು ಸಾಧ್ಯ. ಕೊರೊನಾ ತಡೆಗೆ ಗ್ರಾಮಮಟ್ಟದಲ್ಲಿ ರಚನೆ ಮಾಡಿರುವ ಕಾರ್ಯಪಡೆ ಕ್ರಿಯಾಶೀಲ ವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ಕಾಣುತ್ತಿಲ್ಲ, ಈ ಪಡೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಆಶಾ ಕಾರ್ಯಕರ್ತೆಯರ ವಿರುದ್ಧ ಉಡಾಫೆಯಾಗಿ ಮಾತನಾಡುವವರ ವಿರುದ್ಧ ಕ್ರಮ ಕೈಗೊಂಡರೆ, ಬೇರೆಯವರಿಗೂ ಭಯ ಬರುತ್ತದೆ. ಆಶಾ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿದಂತಾಗುತ್ತದೆ ಎಂದು ಅ ಧಿಕಾರಿಗಳಿಗೆ ತಿಳಿಸಿದರು.
ಸದ್ಯ ಸೋಂಕಿನ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಗ್ರಾಮಗಳ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಅ ಧಿಕಾರಿಗಳಿಗೆ ಧೈರ್ಯ ತುಂಬುವ ಕೆಲಸವಾಗಬೇಕು. ಸೋಂಕು ಕಡಿಮೆಯಾಗುತ್ತಿದೆ ಎಂದು ನಿರ್ಲಕ್ಷé ವಹಿಸುವುದು ಬೇಡ. ಎಂದರು. ಅಧಿ ಕಾರಿಗಳು ಮತ್ತು ಸಿಬ್ಬಂದಿ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಪದೇ ಪದೇ ಹೇಳಿಸಿಕೊಳ್ಳಬಾರದು. ಆಂಬ್ಯುಲೆನ್ಸ್‌ಗಳಿಗೆ ಚಾಲಕರನ್ನು ನೇಮಿಸಿಕೊಳ್ಳುವಂತೆ ತಿಳಿಸಿದರು. ಯಾಕೆ ಇನ್ನೂ ನೇಮಕ ಮಾಡಿಕೊಂಡಿಲ್ಲವೆಂದು ಪ್ರಶ್ನಿಸಿದ ಅವರು, ಸೋಂಕಿತರ ಮನಸ್ಸಿನ ಭಾವನೆ ಮತ್ತು ಅವರ ನೋವನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.
ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಇದೇ ಪರಿಸ್ಥಿತಿ ಮುಂದುವರೆದರೆ, ಪರಿಸ್ಥಿತಿ ಗಂಭೀರವಾಗಲಿದೆ. ಪ್ರತೀ ನಿತ್ಯ 1,400 ರಿಂದ 1,500 ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ. ಮಾನವೀಯತೆಯ ದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳಲ್ಲಿರುವ ಸೋಂಕಿತರಿಗೂ ಆಮ್ಲಜನಕ ಸರಬರಾಜು ಮಾಡಲಾಗಿದೆ ಎಂದರು.
ಜಿಪಂ ಸಿಇಒ ಎಸ್. ಪೂವಿತ ಮಾತನಾಡಿ, ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು. ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪೊಲೀಸರು ಜನರ ಮೇಲೆ ಅತಿಯಾದ ಬಲ ಪ್ರಯೋಗಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿದರು. ಶಾಸಕ ಸಿ.ಟಿ.ರವಿ ಮತ್ತಿತರ ಅಧಿಕಾರಿಗಳು ಇದ್ದರು.