Advertisement
ಮಂಗಳವಾರ ನಗರದ ಚಿಕ್ಕಮಗಳೂರು ಪ್ರಸ್‌ಕ್ಲಬ್‌ನಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ಮಾಧ್ಯಮ ಪ್ರತಿನಿಧಿಗಳಿಗೆ ರೋಗವಾಹಕ ರೋಗಗಳಾದ ಡೆಂಘೀ, ಚಿಕೂನ್‌ಗುನ್ಯಾ, ಮಲೇರಿಯಾ ನಿಯಂತ್ರಣದ ಬಗ್ಗೆ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ಪತ್ರಕರ್ತರಿಗೆ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Related Articles
Advertisement
ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ನಗರಸಭೆ ಹಾಗೂ ಪಟ್ಟಣ ಪಂಚಾಯತ್ ವತಿಯಿಂದ ಫಾಗಿಂಗ್ ನಡೆಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲ ಪ್ರದೇಶದಲ್ಲಿ ನೀರು ಸಂಗ್ರಹವಾಗದಂತೆ ಮುಂಜಾಗ್ರತೆ ವಹಿಸಬೇಕು. ಡೆಂಘೀ ಜ್ವರಕ್ಕೆ ಸಂಬಂಧಿಸಿದ ಸೊಳ್ಳೆಗಳು ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಮನೆಗಳಲ್ಲಿ ಸಂಗ್ರಹಿಸಿರುವ ನೀರನ್ನು ಮೂರು ದಿನಗಳಿಗೊಮ್ಮೆ ಬದಲಾಯಿಸಬೇಕು. ಇದರಿಂದ ಸೊಳ್ಳೆಗಳ ಉತ್ಪತ್ತಿ ತಡೆ ಸಾಧ್ಯವಾಗುವುದರೊಂದಿಗೆ ಡೆಂಘೀ ಜ್ವರ ನಿಯಂತ್ರಣ ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಸ್‌ಕ್ಲಬ್ ಅಧ್ಯಕ್ಷ ಆರಗ ರವಿ ಮಾತನಾಡಿ, ಆರೋಗ್ಯ ಎಲ್ಲರಿಗೂ ಮುಖ್ಯ. ನಮ್ಮ ಆರೋಗ್ಯವನ್ನು ಕಾಪಾಡುವುದು ಕೇವಲ ಆರೋಗ್ಯ ಇಲಾಖೆ ಜವಾಬ್ದಾರಿಯಲ್ಲ. ಅದು ನಮ್ಮ ಜವಾಬ್ದಾರಿಯೂ ಹೌದು. ಸಾಂಕ್ರಾಮಿಕ ರೋಗದಿಂದ ದೂರಾಗಲು ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಮುಖ್ಯಪಾತ್ರ ವಹಿಸುತ್ತಿವೆ. ಆರೋಗ್ಯ ಇಲಾಖೆಯ ಜೊತೆ ಜೊತೆಗೆ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ರೋಗಮುಕ್ತ ಸಮಾಜ ನಿರ್ಮಾಣ ಮಾಡಬಹುದು ಎಂದರು.
ಸಂವಾದ ಕಾರ್ಯಕ್ರಮಕ್ಕೂ ಮೊದಲು ಮಾಧ್ಯಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವರದಿಗಾರರ ಆರೋಗ್ಯ ತಪಾಸಣೆ ನಡೆಸಲಾಯಿತು. ಸಂವಾದ ಕಾರ್ಯಕ್ರಮದಲ್ಲಿ ಡಿವಿಬಿಡಿಸಿ ಅಧಿಕಾರಿ ಡಾ.ಹರೀಶ್‌ಬಾಬು, ಹಿರಿಯ ಆರೋಗ್ಯ ನಿರೀಕ್ಷಕ ಈಶ್ವರಪ್ಪ, ಸುಭಾಷ್, ಪ್ರಸ್‌ಕ್ಲಬ್ ಉಪಾಧ್ಯಕ್ಷ ಎಸ್.ಕೆ.ಲಕ್ಷಿ ್ಮೕಪ್ರಸಾದ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಖಜಾಂಚಿ ಕಿಶೋರ್ ಮುಂತಾದವರು ಭಾಗವಹಿಸಿದ್ದರು.