Advertisement

ಸಮನ್ವಯದಿಂದ ಕಾರ್ಯನಿರ್ವಹಿಸಿ: ಅಂಗಾರ

09:06 PM May 19, 2021 | Team Udayavani |

ಚಿಕ್ಕಮಗಳೂರು: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್‌ ಸೋಂಕು ನಿಯಂತ್ರಿಸಲು ಆರೋಗ್ಯ ಇಲಾಖೆ, ಅಧಿ ಕಾರಿಗಳ ತಂಡ ಮತ್ತು ಆಶಾ ಕಾರ್ಯಕರ್ತೆಯರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ತಿಳಿಸಿದರು.

Advertisement

ಮಂಗಳವಾರ ತಾಲೂಕಿನ ಅಲ್ಲಂಪುರ ಗ್ರಾಮದ ಶಾಲಾ ಆವರಣದಲ್ಲಿ ಕೋವಿಡ್‌ ಜಾಗೃತಿ ಕುರಿತ ಟಾಸ್ಕ್ಫೋರ್ಸ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ ಮೊದಲ ಅಲೆಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದೆವು. ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗುತ್ತಿದೆ.

ಜನರಲ್ಲಿ ಕೋವಿಡ್‌ ಜಾಗೃತಿ ಮೂಡಿಸಿ ಲೋಪದೋಷಗಳ ಕುರಿತು ಮೇಲ್ಮಟ್ಟದ ಅ ಧಿಕಾರಿಗಳ ಗಮನಕ್ಕೆ ತಂದು ಸಮನ್ವಯತೆ ಸಾಧಿ ಸಿ ಕೋವಿಡ್‌ ನಿಯಂತ್ರಿಸಲು ಎಲ್ಲರೂ ಶ್ರಮಿಸಬೇಕೆಂದರು. ಹಳ್ಳಿಗಳಿಗೆ ಬೆಂಗಳೂರು ಸೇರಿದಂತೆ ಬೇರೆ ಭಾಗದಿಂದ ಬಂದವರನ್ನು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಮತ್ತು ಹೋಮ್‌ ಕ್ವಾರಂಟೈನ್‌ನಲ್ಲಿ ಇರಿಸಬೇಕು. ಜಿಲ್ಲೆಗೆ ವಲಸೆ ಬಂದವರ ಮಾಹಿತಿಯನ್ನು ಪಡೆದುಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಯಾವುದೇ ಲೋಪದೋಷಗಳು ಕಂಡು ಬಂದರೂ ಮೇಲಧಿಕಾರಿಗಳ ಗಮನಕ್ಕೆ ತರಬೇಕು.

ಮೇಲಧಿಕಾರಿಗಳು ಸ್ಪಂದಿಸದಿದ್ದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಗ್ರಾಮೀಣ ಭಾಗದಲ್ಲಿ ಜನತೆಗೆ ಕೋವಿಡ್‌ ಬಗ್ಗೆ ಭಯವಿದ್ದಂತೆ ಕಾಣುತ್ತಿಲ್ಲ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಈ ಬಗ್ಗೆ ಗ್ರಾಪಂ ಅ ಧಿಕಾರಿಗಳು, ಜನಪ್ರತಿನಿಧಿಗಳು ಪೊಲೀಸರ ಗಮನಕ್ಕೆ ತರಬೇಕು. ಜಿಲ್ಲೆಯಲ್ಲಿ ಕೋವಿಡ್‌ ಅನ್ನು ಹತೋಟಿಗೆ ತರಲು ಜನರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕು. ಜಾಗೃತಿ ಮೂಡಿಸಬೇಕು. ಜೊತೆಗೆ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸುವಂತೆ ತಿಳಿಸಿದರು.

ಕೋವಿಡ್‌ ವಾರಿಯರ್ಸ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಹಾಗೂ ಆಶಾ ಸ್ವಯಂಸೇವಕ ಸಂಘದ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ ತಪಾಸಣೆ ನಡೆಸಲಿದ್ದು ಆ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಅವರಿಗೆ ಮಾಸ್ಕ್, ಕೈಗವಸುಗಳನ್ನು ನೀಡಬೇಕು ಎಂದು ಸೂಚಿಸಿದರು. ಶಾಸಕ ಸಿ.ಟಿ. ರವಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಳವಾಗುತ್ತಿದ್ದು ಅನಗತ್ಯ ಓಡಾಟ, ವಲಸೆ ಬಂದವರ ಬಗ್ಗೆ ಮಾಹಿತಿ ಕಲೆ ಹಾಕಿ ಕೋವಿಡ್‌ ತಪಾಸಣೆಗೆ ಒಳಪಡಿಸಬೇಕು.

Advertisement

ಸೋಂಕಿನ ಸಣ್ಣ ಪುಟ್ಟ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರ ಸಲಹೆ ಮೇರೆಗೆ ಮಾತ್ರೆಗಳನ್ನು ವಿತರಿಸಬೇಕು. ಗ್ರಾಮೀಣ ಭಾಗದಲ್ಲಿ ಕೋವಿಡ್‌ ನಿರ್ವಹಣೆಗೆ ಸಂಬಂಧಿ ಸಿದಂತೆ ಯಾವುದೇ ಲೋಪದೋಷ ಅಥವಾ ಸಮಸ್ಯೆಗಳು ಇದ್ದಲ್ಲಿ ಜನಪ್ರತಿನಿಧಿ ಗಳ ಗಮನಕ್ಕೆ ತರುವಂತೆ ಸೂಚಿಸಿದರು. ಸಭೆಯಲ್ಲಿ ವಿ. ಪ. ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌, ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಎಂ.ಎಚ್‌. ಅಕ್ಷಯ್‌, ಜಿಪಂ ಸಿಇಒ ಎಸ್‌. ಪೂವಿತಾ, ಉಪವಿಭಾಗಾಧಿ ಕಾರಿ ಡಾ| ಎಚ್‌.ಎಲ್‌. ನಾಗರಾಜ್‌, ತಾಪಂ ಇಒ ತಾರಾನಾಥ್‌, ಗ್ರಾಪಂ ಅಧ್ಯಕ್ಷ ದಾನೇಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next