Advertisement
ವಲಸೆ ಬಂದವರು ಮನೆಯಲ್ಲೇ ಕ್ವಾರಂಟೈನ್ ಆಗದೇ ಹಳ್ಳಿಗಳಲ್ಲಿ ಓಡಾಟ ನಡೆಸಿದ್ದರಿಂದ ಸೋಂಕು ಹಬ್ಬುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಕಠಿಣ ನಿರ್ಣಯ ತಗೆದುಕೊಳ್ಳಲಿದೆ ಎಂದರು.
Related Articles
Advertisement
ಹಂತ ಹಂತವಾಗಿ ವ್ಯಾಕ್ಸಿನ್ ಪೂರೈಕೆ ಮಾಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಲಿದೆ. ಜಿಲ್ಲೆಯಲ್ಲಿ 401 ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 21,842ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 28,722ಮಂದಿಯಲ್ಲಿ ಸೋಂಕು ಪತ್ತೆ ಯಾಗಿದೆ. 202ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದರು.
3ಕೋಟಿ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ. 3ನೇ ಅಲೆ ನಿಯಂತ್ರಣಕ್ಕೆ ಮಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಯಾ ಜಿಲ್ಲಾ ಧಿಕಾರಿಗಳಿಗೆ ಹೆಚ್ಚಿನ ಸ್ವಾತಂತ್ರ ನೀಡಿದ್ದಾರೆ. ಜನರ ಜೀವ ಉಳಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೊದಲ ಆದ್ಯತೆಯಾಗಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ಸರ್ಕಾರದ ನಿಯಮಗಳನ್ನು ಉಲ್ಲಂ ಘನೆ ಮಾಡುತ್ತಿರುವುದರಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳವಾಗಲು ಕಾರಣವಾಗಿದೆ. ಈಗಾಗಲೇ ತಾಲೂಕು ಮತ್ತು ಗ್ರಾಮೀಣ ಮಟ್ಟದಲ್ಲಿ ಕೋವಿಡ್ ಸಭೆಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದರು.
ಮೇ 20ರ ಬೆಳಿಗ್ಗೆಯಿಂದ ಮುಂದಿನ ಆದೇಶದವರೆಗೂ ಜಿಲ್ಲೆಯಲ್ಲಿ ವಾಹನ ಸಂಚಾರ ಮತ್ತು ಜನಸಂಚಾರಕ್ಕೆ ನಿರ್ಬಂಧ ವಿಧಿ ಸಲಾಗುವುದು ಎಂದ ಅವರು, ಅತ್ಯವಶ್ಯಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಈ ಸಂಬಂಧ ಜಿಲ್ಲಾಡಳಿತ ಆದೇಶ ಹೊರಡಿಸಲಿದೆ ಎಂದರು. ಜನರು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು. ಮಾರ್ಗಸೂಚಿಗಳ ವಿರುದ್ಧದ ವರ್ತನೆಗೆ ಜನತೆ ಮುಂದಾಗ ಬಾರದು ಎಲ್ಲಾರೂ ಈ ಕೋವಿಡ್ ಮಹಾಮಾರಿಯನ್ನು ತೊಲಗಿಸಲು ಕೈಜೋಡಿಸಬೇಕೆಂದು ಮನವಿ ಮಾಡಿದರು.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಕೋವಿಡ್ ಸೋಂಕು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ. ಸೋಂಕಿತರಿಗೆ ಚಿಕಿತ್ಸಾ ಸೌಲಭ್ಯ ಹೆಚ್ಚಿಸಿದೆ. ವಿರೋಧ ಪಕ್ಷದವರು ವಿರೋಧ ಮಾಡುವುದಕ್ಕಾಗಿ ವಿರೋಧ ಮಾಡಬಾರದು. ಇದು ಅತ್ಯಂತ ಸಂಕಷ್ಟದ ಸ್ಥಿತಿಯಾಗಿದೆ.
ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ತರೀಕೆರೆ ಕ್ಷೇತ್ರದ ಶಾಸಕ ಡಿ.ಎಸ್. ಸುರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ವರಸಿದ್ಧಿ ವೇಣುಗೋಪಾಲ್, ಎಚ್.ಡಿ.ತಮ್ಮಯ್ಯ ಉಪಸ್ಥಿತರಿದ್ದರು.