ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೋವಿಡ್-19 ಸೋಂಕು ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗುರುವಾರ ಒಂದೇ ದಿನ 125 ಕೋವಿಡ್ ಪ್ರಕರಣ ಪತ್ತೆಯಾಗಿದೆ.
ಚಿಕ್ಕಮಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ -19 ಸೋಂಕಿತರ ಸಂಖ್ಯೆ ಶತಕ ದಾಟಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 916ಕ್ಕೆ ಏರಿಕೆಯಾಗಿದೆ.
ಇಂದು ಚಿಕ್ಕಮಗಳೂರು ತಾಲೂಕಿನಲ್ಲಿ 86 ಪ್ರಕರಣ ದೃಢವಾಗಿದ್ದರೆ, ಕಡೂರು ತಾಲೂಕಿನಲ್ಲಿ 17 ಸೋಂಕು ಪ್ರಕರಣ, ತರೀಕೆರೆಯಲ್ಲಿ 14 ಪ್ರಕರಣಗಳು , ಮೂಡಿಗೆರೆಯಲ್ಲಿ ಮೂರು, ಎನ್.ಆರ್.ಪುರದಲ್ಲಿ ಮೂರು, ಶೃಂಗೇರಿ-ಕೊಪ್ಪದಲ್ಲಿ ಒಂದು ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ.
ಕೋವಿಡ್-19 ಸೋಂಕಿಗೆ ಜಿಲ್ಲೆಯಲ್ಲಿ ಇಂದು ಮತ್ತೋರ್ವ ಸಾವನ್ನಪ್ಪಿದ್ದು, ಜಿಲ್ಲೆಯ ಒಟ್ಟು ಕೋವಿಡ್ 19 ಸೋಂಕಿತರ ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 30 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 461 ಸಕ್ರಿಯ ಪ್ರಕರಣಗಳಿದೆ.