Advertisement
ಭಾನುವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ವಿ ಧಿಸಿದ್ದ ಕಠಿಣ ಲಾಕ್‌ಡೌನ್‌ನಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ನಿಧಾನಗತಿಯಲ್ಲಿ ಇಳಿಕೆಯಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
Related Articles
Advertisement
ಹೊಟೇಲ್, ರೆಸ್ಟೋರೆಂಟ್‌ಗಳು ತಿಂಡಿ- ತಿನಿಸುಗಳನ್ನು ಹೋಮ್ ಡೆಲಿವರಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಮದುವೆ ಸಮಾರಂಭದಲ್ಲಿ 10 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಂತ್ಯ ಸಂಸ್ಕಾರದಲ್ಲಿ 5 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ. ಉಳಿದಂತಹ ಸಭೆ- ಸಮಾರಂಭಗಳನ್ನು ನಿಷೇ ಧಿಸಲಾಗಿದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ಬಂದ ವರನ್ನು 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ತಿಳಿಸಿದರು. ತುರ್ತು ವೈದ್ಯಕೀಯ ಸೇವೆಗೆ ಮಾತ್ರ ವಾಹನಗಳ ಬಳಕೆಗೆ ಅವಕಾಶ ನೀಡಲಾಗಿದೆ. ಸಂಬಂಧಪಟ್ಟ ದಾಖಲೆಗಳನ್ನು ಕಡ್ಡಾಯವಾಗಿ ತೋರಿಸಬೇಕು. ತುರ್ತುಸೇವೆಗೆ ಎಲ್ಲಾ ಇಲಾಖೆ ಅ ಧಿಕಾರಿಗಳು ಮತ್ತು ಸಿಬ್ಬಂದಿಗೆ ವಾಹನ ಬಳಕೆಗೆ ಅವಕಾಶವಿದೆ. ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೋರಿಸಬೇಕು ಎಂದರು.
ಅಂಗಡಿ- ಮುಂಗಟ್ಟುಗಳನ್ನು ವಾಣಿಜ್ಯೋದ್ಯಮ ಮತ್ತು ಕೈಗಾರಿಕೆ ಚಟುವಟಿಕೆಗಳನ್ನು ನಿಷೇ ಧಿಸಲಾಗಿದೆ. ಮೇ 28ರ ಬೆಳಗ್ಗೆ 6ಗಂಟೆಯವರೆಗೂ ಈ ನಿಯಮಗಳು ಜಾರಿಯಲ್ಲಿರಲಿದೆ ಎಂದ ಅವರು, ಜಿಲ್ಲಾಡಳಿತ ವಿಧಿ ಸಿರುವ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರಕಿದೆ. ಕೊರೊನಾ ಹರಡುವುದನ್ನು ತಪ್ಪಿಸಲು ಗ್ರಾಮೀಣ ಪ್ರದೇಶದ ಜನರು ತಮ್ಮ ಊರುಗಳಿಗೆ ಯಾರೂ ಬರಬಾರದೆಂದು ರಸ್ತೆಗಳಿಗೆ ಬೇಲಿ ಹಾಕುವ ಮೂಲಕ ಸೋಂಕು ನಿಯಂತ್ರಣಕ್ಕೆ ಸ್ಪಂ ದಿಸುತ್ತಿದ್ದಾರೆ ಎಂದು ತಿಳಿಸಿದರು.
ಸೋಂಕಿತರನ್ನು ಮನೆಗಳಲ್ಲಿ ಹೋಮ್ ಐಸೋಲೇಶನ್‌ಗೆ ಒಳಪಡಿಸುವುದರಿಂದ ಕುಟುಂಬದವರಿಗೆ ಸೋಂಕು ತಗುಲುತ್ತದೆ ಎಂಬ ಕಾರಣದಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಸಿಸಿಸಿ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಓರ್ವ ಡಾಕ್ಟರ್, ಓರ್ವ ನರ್ಸ್ ಹಾಗೂ ಮೂಲ ಸೌಲಭ್ಯಗಳನ್ನು ನೀಡಲಾಗಿದೆ. ಸೋಂಕಿತರ ಆರೋಗ್ಯ ಸುಧಾರಿಸುವರೆಗೂ ಸಿಸಿಸಿ ಕೇಂದ್ರದಲ್ಲಿ ಇರುವಂತೆ ಮನವಿ ಮಾಡಿದರು. ಸೋಂಕಿತರ ಮನೆಗಳಿಗೆ ಸ್ಟಿಕರ್ ಅಂಟಿಸಲಾಗುತ್ತಿದೆ.
ಸೋಂಕಿತರು ಮನೆಯಿಂದ ಹೊರ ಬಂದರೆ ಅಂತವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ದೇಶ- ವಿದೇಶದಲ್ಲಿರುವ ಡಾಕ್ಟರ್ ಗಳ ತಂಡ ಸೇವೆಗೆ ಮುಂದೆ ಬಂದಿದ್ದು, ಅವರು ನಮ್ಮೊಂದಿಗೆ ಕೈ ಜೋಡಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್. ಅಕ್ಷಯ್, ಜಿಪಂ ಸಿಇಒ ಎಸ್. ಪೂವಿತಾ ಇದ್ದರು.